More

    29ರಿಂದ ಎಸ್​ಎಸ್​ಎಲ್​ಸಿ ಪುನರ್ಮನನ ತರಗತಿ, ಚಂದನದಲ್ಲಿ ಪ್ರಸಾರ

    ಬೆಂಗಳೂರು: ಕರೊನಾದಿಂದಾಗಿ ಲಾಕ್​ಡೌನ್ ಹಿನ್ನೆಲೆಯಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ.29ಕ್ಕೆ ಪುನರ್ಮನನ ತರಗತಿಗಳನ್ನು ಆರಂಭಿಸಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್​ಕುಮಾರ್​ ತಿಳಿಸಿದ್ದಾರೆ.

    ಈ ತರಗತಿಗಳು ಪ್ರತಿದಿನ ಮಧ್ಯಾಹ್ನ 3 ರಿಂದ 4.30 ರವರೆಗೆ ನಡೆಯಲಿದ್ದು, ನುರಿತ ಶಿಕ್ಷಕರು ವಿಷಯವಾರು ಬೋಧನೆ ಮಾಡಲಿದ್ದಾರೆ. ಮೊದಲ 16 ದಿನ ಪ್ರತಿ 45 ನಿಮಿಷಗಳ ಎರಡು ಅವಧಿಗಳಲ್ಲಿ ಗಣಿತ ಹಾಗೂ ವಿಜ್ಞಾನ ವಿಷಯಗಳ ಬೋಧನಾ ತರಗತಿಗಳು ನಡೆಯಲಿದ್ದು, 17ನೇ ದಿನ ಈ ಎರಡೂ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ವಿಧಾನವನ್ನು ಶಿಕ್ಷಕರು ತಿಳಿಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

    18ನೇ ದಿನದಿಂದ ಸಮಾಜ ವಿಜ್ಞಾನದ ತರಗತಿಗಳು 6 ದಿನಗಳ ಅವಧಿಗೆ ನಡೆಯಲಿದ್ದು, ನಂತರದ ದಿನಗಳಲ್ಲಿ ಕನ್ನಡ ಮತ್ತು ಆಂಗ್ಲ ಭಾಷಾ ವಿಷಯಗಳ ಬೋಧನೆಯನ್ನೂ ಮಾಡಲಾಗುತ್ತದೆ. ಪ್ರತಿ ವಿಷಯ ಬೋಧನೆಯ ಕೊನೆಯಲ್ಲಿ ವಿಶೇಷವಾಗಿ ತಯಾರಿಸಲಾಗಿರುವ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಿಸುವ ವಿಧಾನವನ್ನು ಹೇಳಿಕೊಡಲಾಗುತ್ತದೆ ಎಂದು ಸುರೇಶ್ ಕುಮಾರ್ ವಿವರಿಸಿದ್ದಾರೆ.
    ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಉತ್ತಮವಾಗಿ ಪರೀಕ್ಷೆ ಬರೆಯಬೇಕೆಂದು ಸಚಿವರು ಸಲಹೆ ನೀಡಿದ್ದಾರೆ.

    ಬಿಟ್ಟೆನೆಂದರೂ ಬಿಡದ ಹೆಮ್ಮಾರಿ ಕರೊನಾ, 70 ದಿನಗಳಾದರೂ ದೇಹದಲ್ಲೇ ಠಿಕಾಣಿ, ಗುಣಮುಖರಾದವರಲ್ಲಿ ಪದೇಪದೆ ಸೋಂಕು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts