ಧರ್ಮಸ್ಥಳ ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಬಹುಮಾನ

New Project (5)
Published on

ಬೆಳ್ತಂಗಡಿ: ದಾವಣಗೆರೆಯ ಜಿ.ಎಂ.ಯುನಿವರ್ಸಿಟಿ ಆಫ್ ಟೆಕ್ನಾಲಜಿ ಆಯೋಜಿಸಿದ ರಾಜ್ಯಮಟ್ಟದ ವಿವಿಧ ತಾಂತ್ರಿಕ ಸ್ಪರ್ಧೆಗಳಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ವಿದ್ಯಾರ್ಥಿಗಳು 9 ವಿಭಾಗಗಳಲ್ಲಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ವಿದ್ಯಾರ್ಥಿಗಳಾದ ರೆಹನ್, ಮಧುಕರ, ಸಂದೇಶ್, ಶ್ರವಣ್ ಕುಮಾರ್, ಹರ್ಷಕುಮಾರ್ ಪ್ರಾಜೆಕ್ಟ್ ಎಕ್ಸ್ಪೋ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದಿದ್ದಾರೆ. ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಪ್ರಶಾಂತ್ ಮತ್ತು ಪ್ರಜ್ವಲ್ ಗೌಡ ಟೆಕ್ನಿಕಲ್ ಪೇಪರ್ ಪ್ರೆಸೆಂಟೇಷನ್‌ನಲ್ಲಿ ಪ್ರಥಮ ಬಹುಮಾನ ಮತ್ತು ಚಿರಂಜೀವಿ ಚಿನ್ಮಯಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಅದೇ ವಿಭಾಗದ ರವಿಶಂಕರ್ ಪಾಟೀಲ್ ಮತ್ತು ಅಭಿಷೇಕ್ ಪ್ರಶಾಂತ್ ತಾಂತ್ರಿಕ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿದ್ದಾರೆ.

ಸಿವಿಲ್ ವಿಭಾಗದ ಶ್ರವಣ್ ಕುಮಾರ್ ಟೆಕ್ನಿಕಲ್ ಪೇಪರ್ ಪ್ರೆಸೆಂಟೇಷನ್‌ನಲ್ಲಿ ದ್ವಿತೀಯ ಸ್ಥಾನ ಹಾಗೂ ರೆಹನ್ ತಾಂತ್ರಿಕ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಮತ್ತು ಟೆಕ್ ಸ್ಕಿಲ್ ಚಾಲೆಂಜ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಪರವಾಗಿ ಅಧ್ಯಕ್ಷ ಡಾ.ಡಿ.ವೀರೇಂದ್ರ ಹೆಗ್ಗಡೆಯವರು , ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net