

ನ್ಯೂಯಾರ್ಕ್: ಇಲ್ಲಿನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ-20 ವಿಶ್ವಕಪ್ನ 08ನೇ ಪಂದ್ಯದಲ್ಲಿ ಅಲ್ರೌಂಡ್ ಪ್ರದರ್ಶನದ ಫಲವಾಗಿ ಐರ್ಲೆಂಡ್ ವಿರುದ್ಧ 08 ವಿಕೆಟ್ಗಳ ಭರ್ಜರಿ ಜಯಗಳಿಸಿದೆ. ಇನ್ನೂ ಟೀಮ್ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ ಕ್ಯಾಪ್ಟನ್ ರೋಹಿತ್ ಶರ್ಮಾ ಟಿ20 ಕ್ರಿಕೆಟ್ನಲ್ಲಿ ಮೂರು ಐತಿಹಾಸಿಕ ದಾಖಲೆಗಳನ್ನು ಬರೆದಿದ್ದಾರೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡವನ್ನು ಇನ್ನಿಲ್ಲದಂತೆ ಕಾಡಿದ ಟೀಮ್ ಇಂಡಿಯಾ ಬೌಲರ್ಗಳು ಎದುರಾಳಿ ತಂಡವನ್ನು 97ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. 98 ರನ್ಗಳ ಸುಲಭ ಗುರಿ ಬೆನ್ನತ್ತಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (52 ರನ್, 37 ಎಸೆತ, 4 ಬೌಂಡರಿ, 3 ಸಿಕ್ಸರ್), ರಿಷಭ್ ಪಂತ್ (36 ರನ್, 26 ಎಸೆತ, 3 ಬೌಂಡರಿ, 2 ಸಿಕ್ಸರ್) ಬಿರುಸಿನ ಬ್ಯಾಟಿಂಗ್ ಫಲವಾಗಿ ಗುರಿಯನ್ನು 12.2 ಓವರ್ಗಳಲ್ಲಿ ತಲುಪುವ ಮೂಲಕ ಗೆಲುವಿನ ನಗೆ ಬೀರಿತ್ತು.
ರೋಹಿತ್ ಕ್ಯಾಪ್ಟನ್ಸಿಯಲ್ಲಿ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಗೆಲ್ಲುವ ಮೂಲಕ ವಿಶ್ವಕಪ್ ಅಭಿಯಾನವನ್ನು ಭರ್ಜರಿಯಾಗಿ ಶುರು ಮಾಡಿರುವ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಫಾರ್ಮ್ನಲ್ಲಿರುವುದು ತಂಡಕ್ಕೆ ಹೆಚ್ಚು ಸಹಕಾರಿಯಾಗಿದೆ. ಕ್ಯಾಪ್ಟನ್ ಆಗಿ ತಮ್ಮ ಬ್ಯಾಟಿಂಗ್ ಮೂಲಕ ಅತ್ಯುತಮ್ಮ ಪ್ರದರ್ಶನ ನೀಡುತ್ತಿರುವ ಹಿಟ್ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಇದೀಗ ಟಿ20 ಕ್ರಿಕೆಟ್ನಲ್ಲಿ ಮೂರು ಐತಿಹಾಸಿಕ ದಾಖಲೆಗಳನ್ನು ಬರೆದಿದ್ದಾರೆ. ಅದು ಒಂದೇ ಪಂದ್ಯದಲ್ಲಿ ಎಂಬುದು ವಿಶೇಷ ಸಂಗತಿಯಾಗಿದೆ.
ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಗಳಿಸುವ ಮೂಲಕ ಟಿ20 ಕ್ರಿಕೆಟ್ನಲ್ಲಿ 4000 ರನ್ ಪೂರೈಸಿದ ವಿಶ್ವದ ಮೂರನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ರೋಹಿತ್ಗೂ ಮುನ್ನ ವಿರಾಟ್ ಕೊಹ್ಲಿ (4,037 ರನ್) ಮತ್ತು ಬಾಬರ್ ಅಜಮ್ (4,023 ರನ್) ಮುಂಚೂಣಿಯಲ್ಲಿದ್ದಾರೆ. ಇದಲ್ಲದೆ ಟಿ-20 ವಿಶ್ವಕಪ್ನಲ್ಲಿ 1000ರನ್ ಪೂರೈಸಿದ ಮೂರನೇ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ. ರೋಹಿತ್ಗೂ ಮುನ್ನ ವಿರಾಟ್ (1,141 ರನ್) ಮತ್ತು ಶ್ರೀಲಂಕಾದ ಮಾಜಿ ಆಟಗಾರ ಮಹೇಲಾ ಜಯವರ್ಧನೆ (1,016 ರನ್) ಈ ಸಾಧನೆ ಮಾಡಿದ್ದಾರೆ.
ಟೀಮ್ ಇಂಡಿಯಾ ಎಲ್ಲಾ ಮಾದರಿಗಳಲ್ಲಿ 600 ಸಿಕ್ಸರ್ಗಳನ್ನು ಸಿಡಿಸಿದ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಪಾತ್ರರಾಗಿದ್ದಾರೆ. ಈ ಮೈಲಿಗಲ್ಲನ್ನು ತಲುಪಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇದಲ್ಲದೆ ಐಸಿಸಿ ನಡೆಸುವ ಸೀಮಿತ ಓವರ್ಗಳ ಟೂರ್ನಿಯಲ್ಲಿ 100 ಸಿಕ್ಸರ್ ಸಿಡಿಸಿದ ಮೊದಲ ಬ್ಯಾಟ್ಸ್ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇನ್ನು ಟಿ20 ವಿಶ್ವಕಪ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಮಣಿಸುವ ಮೂಲಕ ರೋಹಿತ್ ಶರ್ಮಾ ಕ್ಯಾಪ್ಟನ್ ಆಗಿ ಇಂಟರ್ನ್ಯಾಷನಲ್ ಟಿ20 ಪಂದ್ಯಗಳಲ್ಲಿ 41 ಗೆಲುವು ಸಾಧಿಸಿದ ಎಂ.ಎಸ್. ಧೋನಿ ಅವರ ದಾಖಲೆಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.