ಆರ್‌ಐ ಕಚೇರಿ ಮೇಜಿನ ಗಾಜು ಪುಡಿ – ಹಕ್ಕುಪತ್ರ ತಕರಾರು ಹಿನ್ನೆಲೆಯಲ್ಲಿ ಗುದ್ದಿದ ಬಿಜೆಪಿ ಮುಖಂಡ

blank

ವಿಟ್ಲ: ಮನೆ ಅಡಿಸ್ಥಳದ ಹಕ್ಕುಪತ್ರ ಪಡೆಯುವ ವಿಚಾರದಲ್ಲಿ ಕಂದಾಯ ನಿರೀಕ್ಷಕರ ಕಚೇರಿಯಲ್ಲಿ ರಾಜಕೀಯ ವ್ಯಕ್ತಿಗಳ ಬೆಂಬಲಿಗರಿಂದ ದಾಂಧಲೆ ನಡೆದಿದ್ದು, ಮೇಜಿನ ಗಾಜು ಪುಡಿಯಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಬಂದೋಬಸ್ತು ಮಾಡಿದ್ದಾರೆ.

ವೀರಕಂಬ ನಿವಾಸಿ ನೆಕ್ಕಿಲಾರು ಶೇಖ್ ಶಿಬಾನ್ ಎಂಬುವರು ಇತ್ತೀಚೆಗೆ ಸರ್ಕಾರಿ ಜಾಗದಲ್ಲಿ ಮನೆ ನಿರ್ಮಿಸಿ ಅಡಿಸ್ಥಳವನ್ನು ತಮ್ಮ ಹೆಸರಿಗೆ ಮಾಡಿಕೊಳ್ಳುವ ನಿಟ್ಟಿನಲ್ಲಿ ೯೪ಸಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಕಂದಾಯ ಅಽಕಾರಿಗಳು ಸ್ಥಳ ತನಿಖೆಯನ್ನು ನಡೆಸಿ ವರದಿ ಸಲ್ಲಿಸುವ ಸಂದರ್ಭದಲ್ಲಿ ಮನೆ ಅರಣ್ಯ ಇಲಾಖೆಯಿಂದ ನಿಽಷ್ಟ ದೂರದಲ್ಲಿದ್ದು, ಅಲ್ಲಿಂದ ಒಪ್ಪಿಗೆ ಪಡೆಯುವ ಬಗ್ಗೆ ಷರಾ ಬರೆದಿದ್ದಾರೆ. ಇದರಿಂದ ಜಾಗ ಮಂಜೂರಾತಿ ಕಷ್ಟವಿದ್ದು, ಅದನ್ನು ತೆಗೆಯಬೇಕೆಂದು ಇಲಾಖೆಗೆ ಒತ್ತಡ ಹಾಕಲಾಗಿತ್ತು.

ಅಽಕಾರಿಗಳು ಅದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಮಾಧವ ಮಾವೆ ಬೆಂಬಲಿಗರ ಜತೆಗೆ ವಿಟ್ಲದ ಆರ್‌ಐ ಕಚೇರಿಗೆ ಆಗಮಿಸಿದರು. ಮಾತಿನ ಮಧ್ಯೆ ಆಕ್ರೋಶಿತ ವ್ಯಕ್ತಿ ಸರ್ಕಾರಿ ಅಽಕಾರಿಯನ್ನು ನಿಂದಿಸಿ ಮೇಜಿಗೆ ಕೈಯನ್ನು ಬಡಿದು ದಾಂಧಲೆ ನಡೆಸಿದ್ದಾನೆ. ಈ ವೇಳೆ ಮೇಜಿನ ಮೇಲೆ ಹಾಸಲಾಗಿದ್ದ ಗಾಜು ಪುಡಿ ಪುಡಿಯಾಗಿದೆ. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಮಾಹಿತಿ ಪಡೆದ ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸೇರಿದ ಗುಂಪನ್ನು ಚದುರಿಸಿದ್ದಾರೆ. ನಾಕಬಂದಿ ರಚಿಸಿ ಯಾರೂ ಆರ್‌ಐ ಕಚೇರಿಯನ್ನು ಪ್ರವೇಶಿಸದಂತೆ ಬಂದೋಬಸ್ತು ಕೈಗೊಂಡಿದ್ದಾರೆ. ಕಂದಾಯ ಇಲಾಖೆಯ ಹಿರಿಯ ಅಽಕಾರಿಗಳಿಗೆ ಘಟನೆ ಬಗ್ಗೆ ವಿವರ ನೀಡಲಾಗಿದ್ದು, ದೂರು ಸಲ್ಲಿಕೆ ಪ್ರಕ್ರಿಯೆ ನಡೆಯಲಿದೆ.

Share This Article

ಬಿದಿರಿನ ಉಪ್ಪಿನ ಬಗ್ಗೆ ನಿಮಗೆ ತಿಳಿದಿದೆಯೇ? ಇದರ ಬೆಲೆ ಮತ್ತು ಪ್ರಯೋಜನಗಳನ್ನು ಕೇಳಿದ್ರೆ ಅಚ್ಚರಿ ಖಚಿತ! Bamboo Salt

Bamboo Salt : ಆರು ಮಸಾಲೆಗಳಲ್ಲಿ ಉಪ್ಪು ಕೂಡ ಒಂದು. ಭಾರತೀಯ ಪಾಕಪದ್ಧತಿಯಲ್ಲಿ ಉಪ್ಪು ಬಹಳ…

ಬಿರು ಬೇಸಿಗೆಯಲ್ಲಿ ನೆಲ್ಲಿಕಾಯಿ ಸೇವಿಸಿ, ಈ ಅದ್ಭುತ ಪ್ರಯೋಜನ ಪಡೆಯಿರಿ; ಇಲ್ಲಿದೆ ಉಪಯುಕ್ತ ಮಾಹಿತಿ | Amla

Amla Benefits: ಸಾಮಾನ್ಯವಾಗಿ ಭಾರತೀಯ ನೆಲ್ಲಿಕಾಯಿಯನ್ನು ಆಂಗ್ಲ ಭಾಷೆಯಲ್ಲಿ ಆಮ್ಲಾ/ ಗೂಸ್​ಬೆರಿ ಎಂದು ಕರೆಯಲಾಗುತ್ತದೆ. ಇದು…

ಮನೆಯಲ್ಲಿ ಈ 4 ವಸ್ತುಗಳಿದ್ದರೆ ಲಕ್ಷ್ಮಿ ಒಲಿಯುವುದಿಲ್ಲ! ಇದನ್ನು ಗಮನಿಸದೆ ಹೋದ್ರೆ ಕೈಯಲ್ಲಿ 1 ಪೈಸೆಯೂ ಉಳಿಯಲ್ಲ | Vastu Tips

Vastu Tips: ಇಂದು ಯಾರಿಗೆ ತಾನೇ ಧನಲಕ್ಷ್ಮಿ ಬೇಡ? ವಿದ್ಯೆ ಇಲ್ಲದೇ ಹೋದ್ರೂ ಪರವಾಗಿಲ್ಲ ಹಣವೇ…