ಶಾಲಾ ಮಕ್ಕಳ ಬಿಸಿಯೂಟದ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿಕಾಳುಗಳು ಪತ್ತೆ !

ಮೈಸೂರು: ಶಾಲಾ ಮಕ್ಕಳ ಬಿಸಿಯೂಟದಲ್ಲಿ ಪ್ಲಾಸ್ಟಿಕ್​ ಅಕ್ಕಿ ಪತ್ತೆಯಾಗಿರುವ ಘಟನೆ ತಿ.ನರಸೀಪುರ ತಾಲೂಕಿನ ಬನ್ನಹಳ್ಳಿಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದ್ದು ಪಾಲಕರ ಆಕ್ರೋಶಕ್ಕೆ ಕಾರಣವಾಗಿದೆ.

ಬನ್ನಹಳ್ಳಿಹುಂಡಿ ಗ್ರಾಮ ವರುಣ ಮತ್ತು ತಿ.ನರಸೀಪುರ ಎರಡು ಕ್ಷೇತ್ರಗಳನ್ನೂ ಒಳಗೊಂಡಿದೆ. ಈ ಗ್ರಾಮದ ಶಾಲೆಯ ಅಡುಗೆ ಸಹಾಯಕರು ಅಕ್ಕಿ ಸೋಸುವಾಗ ಪ್ಲಾಸ್ಟಿಕ್​ ಅಕ್ಕಿಕಾಳುಗಳೂ ಪತ್ತೆಯಾಗಿವೆ. ಪಾಲಕರು, ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯನ್ನು ತನಿಖೆಗೆ ಒಳಪಡಿಸಬೇಕು ಹಾಗೂ ಉತ್ತಮ ಗುಣಮಟ್ಟದ ಆಹಾರ ಪೂರೈಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *