More

    ಮೂರನೇ ಬಾರಿಗೆ ಗ್ರ್ಯಾಮಿ ಅವಾರ್ಡ್​ ಗೆದ್ದ ಬೆಂಗಳೂರು ಮೂಲದ ರಿಕ್ಕಿ ಕೇಜ್

    ಬೆಂಗಳೂರು: ಲಾಸ್ ಏಂಜಲೀಸ್​ನಲ್ಲಿ ನಡೆದ 65ನೇ ಗ್ರ್ಯಾಮಿ ಅವಾರ್ಡ್​ನಲ್ಲಿ ಬೆಂಗಳೂರು ಮೂಲದ ಸಂಗೀತ ಸಂಯೋಜಕ ರಿಕ್ಕಿ ಕೇಜ್ (Ricky Kej) ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ರಿಕ್ಕಿ ಕೇಜ್ ಮೂರನೇ ಬಾರಿಗೆ ಗ್ರ್ಯಾಮಿ ಅವಾರ್ಡ್ ಪಡೆದುಕೊಂಡಿದ್ದು, ಇದೀಗ ಎಲ್ಲಡೆಯಿಂದ ಅವರಿಗೆ ಶುಭಾಶಯಗಳು ಬರುತ್ತಿವೆ.

    ಕಳೆದ ವರ್ಷದ ನವೆಂಬರ್​ನಲ್ಲಿ ರಿಕ್ಕಿ ಕೇಜ್ ಅವರ ಡಿವೈನ್ ಟೈಡ್ಸ್ ಒಂಭತ್ತು-ಹಾಡುಗಳ ಆಲ್ಬಂ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶಿತಗೊಂಡಿತ್ತು. ಈ ವೇಳೆ ಸಂತಸ ಹಂಚಿಕೊಂಡಿದ್ದ ರಿಕ್ಕಿ ಕೇಜ್, ಮೂರನೇ ಬಾರಿಯೂ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿರುವುದಕ್ಕೆ ರೋಮಾಂಚನವಾಗುತ್ತಿದೆ ಎಂದು ಹೇಳಿಕೊಂಡಿದ್ದರು.

    ಮೂರನೇ ಬಾರಿಗೆ ಗ್ರ್ಯಾಮಿ ಪ್ರಶಸ್ತಿ ದೊರೆತ ಬಗ್ಗೆ ಟ್ವಿಟರ್​ನಲ್ಲಿ ಸಂತಸ ಹಂಚಿಕೊಂಡಿರುವ ರಿಕ್ಕಿ ಕೇಜ್, ಪ್ರಶಸ್ತಿ ಹಾಗೂ ಗೌರವವನ್ನು ದೇಶಕ್ಕೆ ಅರ್ಪಿಸುತ್ತಿದ್ದೇನೆ. ಪ್ರತಿಷ್ಠಿತ ಪ್ರಶಸ್ತಿಯನ್ನು ಮತ್ತೊಮ್ಮೆ ಪಡೆದುಕೊಂಡಿರುವುದಕ್ಕೆ ಸಂತಸವಾಗುತ್ತಿದೆ. ಈ ಮೂಲಕ ದೇಶದ ಪ್ರತಿಷ್ಠೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಅವಕಾಶ ಒದಗಿ ಬಂದಿರುವುದಕ್ಕೆ ಕೃತಜ್ಞತೆ ವ್ಯಕ್ತಪಡಿಸುತ್ತೇನೆ ಎಂದು ಹೇಳಿಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts