

ನವದೆಹಲಿ: ಪಾಕಿಸ್ತಾನ ಹಾಗೂ ದುಬೈ ಆತಿಥ್ಯದಲ್ಲಿ (ಭಾರತದ ಪಂದ್ಯಗಳು ಮಾತ್ರ) ನಡೆಯಲಿರುವ ಚಾಂಪಿಯನ್ಸ್ ಟ್ರೋಫಿಗೆ (Champions Trophy) ಈಗಾಗಲೇ ದಿನಗಣನೆ ಆರಂಭವಾಗಿದ್ದು, ತಂಡಗಳು ಈಗಾಗಲೇ ಅಗತ್ಯ ತಯಾರಿಯನ್ನು ಆರಂಭಿಸಿದೆ. ಫೆಬ್ರವರಿ 19ರಿಂದ ಮಾರ್ಚ್ 09ರವರೆಗೆ ನಡೆಯಲಿರುವ ಈ ಟೂರ್ನಿಯು ಹೆಚ್ಚು ಸದ್ದು ಮಾಡಿದ್ದು, ಮಾಜಿ ಆಟಗಾರರ ಹೇಳಿಕೆಯಿಂದಲೇ ಎಂದರೆ ತಪ್ಪಾಗಲಾರದು. ಇದೀಗ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಲೆಜೆಂಡರಿ ಆಟಗಾರ ರಿಕಿ ಪಾಂಟಿಂಗ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಯಾವ ತಂಡ ಫಿನಾಲೆ ಪ್ರವೇಶಿಸುತ್ತದೆ ಎಂದು ಭವಿಷ್ಯ ನುಡಿಯುವ ಮೂಲಕ ಗಮನ ಸೆಳೆದಿದ್ದಾರೆ.
ಐಸಿಸಿಗೆ ನೀಡಿದ ಸಂದರ್ಶನದಲ್ಲಿ ಈ ಬಗ್ಗೆ ಮಾತನಾಡಿರುವ ರಿಕಿ ಪಾಂಟಿಂಗ್, ನನ್ನ ಪ್ರಕಾರ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದ್ದು, ಸೆಮಿಫೈನಲ್ಗೆ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಪ್ರವೇಶಿಸಲಿದೆ. ಪ್ರಸ್ತುತ ಕ್ರಿಕೆಟ್ ವಿಶ್ಲೇಷಣೆ ಮಾಡುವುದಾದರೆ ಈ ತಂಡಗಳಲ್ಲಿ ಉತ್ತಮ ಆಟಗಾರರಿದ್ದು, ಪಾಕಿಸ್ತಾನ ಕೂಡ ಉತ್ತಮ ಕ್ರಿಕೆಟ್ ಆಡುತ್ತಿದೆ.
ಇತ್ತೀಚಿನ ವರ್ಷಗಳನ್ನು ನೋಡುವುದಾದರೆ ಐಸಿಸಿ ನಡೆಸುವ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಹಾಗೂ ಭಾರತ ತಂಡಗಳನ್ನು ನೋಡಿದರೆ ಎಲ್ಲವೂ ತಿಳಿಯುತ್ತದೆ. ಏಕೆಂದರೆ ಉಭಯ ದೇಶದಲ್ಲಿ ಗುಣಮಟ್ಟದ ಆಟಗಾರರು ಹಾಗೂ ಕ್ರಿಕೆಟ್ ಆಡುತ್ತಿದ್ದು, ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯನ್ನು (Champions Trophy) ಅಷ್ಟು ಸುಲಭವಾಗಿ ಅಂದಾಜಿಸುವಂತಿಲ್ಲ. ಆದರೆ, ನನ್ನ ಪ್ರಕಾರ ಭಾರತ ಹಾಗೂ ಆಸ್ಟ್ರೇಲಿಯಾ ಫೈನಲ್ನಲ್ಲಿ ಮುಖಾಮುಖಿಯಾಗಲಿವೆ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಲೆಜೆಂಡರಿ ಆಟಗಾರ ರಿಕಿ ಪಾಂಟಿಂಗ್ ಅಭಿಪ್ರಾಯಪಟ್ಟಿದ್ದಾರೆ.
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೀ), ಕೆಎಲ್ ರಾಹುಲ್ (ವಿಕೀ), ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್.