ಬೈಕ್ ಡಿಕ್ಕಿಯಾಗಿ ಸವಾರ ಸಾವು

shashank
ಶಶಾಂಕ್ ಮೊಗವೀರ
Published on

ಕುಂದಾಪುರ: ಕುಂದಾಪುರ ನಗರ ಸಮೀಪದ ಹಂಗಳೂರಿನ ನಗು ಪ್ಯಾಲೇಸ್ ಎದುರುಗಡೆ ಶನಿವಾರ ತಡರಾತ್ರಿ ಸರ್ವೀಸ್ ರಸ್ತೆಯಲ್ಲಿ ಬೈಕ್‌ಗಳೆರಡು ಮುಖಾಮುಖಿ ಡಿಕ್ಕಿಯಾಗಿ ಕುಂದಾಪುರ ನಗರದ ಬರೆಕಟ್ಟುವಿನ ಬಾಳೆಹಿತ್ತು ನಿವಾಸಿ, ಖಾಸಗಿ ಕಂಪನಿ ಉದ್ಯೋಗಿ ಶಶಾಂಕ್ ಮೊಗವೀರ(22) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಶಶಾಂಕ್ ಮೊಗವೀರ ರಾತ್ರಿ 11ರ ವೇಳೆಗೆ ಹಂಗಳೂರಿನ ಪೆಟ್ರೋಲ್ ಬಂಕ್‌ನಲ್ಲಿ ಪೆಟ್ರೋಲ್ ತುಂಬಿಸಿ ಮನೆಗೆ ಹಿಂತಿರುಗುವ ಸಮಯದಲ್ಲಿ ಅಪಘಾತ ನಡೆದಿದೆ. ತಕ್ಷಣ ಅವರನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ವೈದ್ಯರು ಶಶಾಂಕ್ ಮರಣ ಹೊಂದಿರುವುದನ್ನು ದೃಢಪಡಿಸಿದ್ದಾರೆ. ಬುಲೆಟ್ ಸವಾರ, ಹಿಂದೆ ಕುಳಿತಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದು, ಇಬ್ಬರನ್ನೂ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಂದಾಪುರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net