ಉಜ್ಜಿನಿ: ಪ್ರತಿಯೊಬ್ಬರೂ ಮತ ಚಲಾಯಿಸುವ ಮೂಲಕ ಪ್ರಜಾಪ್ರಭುತ್ವ ಹಬ್ಬವನ್ನು ಆಚರಿಸಬೇಕು ಎಂದು ಪಿಡಿಒ ಪ್ರಶಾಂತ ಕುಮಾರ್ ಹೇಳಿದರು.
ಇದನ್ನೂ ಓದಿ: ಹಕ್ಕು ಪ್ರತಿಪಾಧಿಸಲು ಸಂವಿಧಾನ ನೆರವು
ನಿಂಬಳಗೆರೆಯಲ್ಲಿ ಗ್ರಾಮ ಪಂಚಾಯಿತಿಯಿಂದ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಸೋಮವಾರ ಮಾತನಾಡಿದರು. ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ.
ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಪ್ರತಿಯೊಬ್ಬರೂ ಮತದಾನದಲ್ಲಿ ಭಾಗಿಯಾಗುವಂತೆ ಪ್ರೇರೇಪಿಸಬೇಕು ಎಂದರು. ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿ ಶಾಹಿನಾಬಾನು,
ಆರೋಗ್ಯ ನಿರೀಕ್ಷಣಾಧಿಕಾರಿ ಜೆ.ಮಂಜುನಾಥ, ಆಶಾ ಕಾರ್ಯಕರ್ತೆಯರಾದ ಓಬಕ್ಕ, ನಾಗವೇಣಿ, ಅಂಗನವಾಡಿ ಕಾರ್ಯಕರ್ತೆಯರಾದ ದಾಕ್ಷಾಯಿಣಿ, ಚೌಡಮ್ಮ, ಕರಿಬಸಮ್ಮ ಇತರರಿದ್ದರು.