

ಅಹಮದಬಾದ್: ಶುಕ್ರವಾರ ಗುಜರಾತ್ ಟೈಟಾನ್ಸ್-ಚೆನೈ ಸೂಪರ್ ಕಿಂಗ್ಸ್ ನಡುವೆ ನಡೆದ IPL ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಕ್ರಿಕೆಟ್ ತಂಡದ ಸೀಮಿತ ಓವರ್ಗಳ ನಾಯಕ ಕೇನ್ ವಿಲಿಯಮ್ಸನ್ ಗಾಯಗೊಂಡಿದ್ದಾರೆ.
ಪಂದ್ಯದ 13ನೇ ಓವರ್ ವೇಳೆ ಮಿಡ್ ವಿಕೆಟ್ ಬೌಂಡರಿಯಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಚೆನೈ ತಂಡದ ಆರಂಭಿಕ ಋತುರಾಜ್ ಗಾಯಕ್ವಾಡ್ ಬಾರಿಸಿದ ಚೆಂಡನ್ನು ಕ್ಯಾಚ್ ಹಿಡಿಯುವ ವೇಳೆ ಮೊಣಕಾಲಿಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ. ಕೇನ್ ವಿಲಿಯಮ್ಸನ್ ಬದಲಿಗೆ ಸಾಯಿ ಸುದರ್ಶನ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಕಣಕ್ಕಿಳಿಸಲಾಯಿತು.
ಕೇನ್ ವಿಲಿಯಮ್ಸನ್ ಗಾಯದ ಕುರಿತು ಪ್ರತಿಕ್ರಿಯಿಸಿರುವ ಗುಜರಾತ್ ಟೈಟಾನ್ಸ್ ತಂಢದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಸ್ಕ್ಯಾನಿಂಗ್ಗೆ ಒಳಪಡಿಸಲಾಗಿದ್ದು ಗಾಯದ ತೀವ್ರತೆ ಬಗ್ಗೆ ಇನ್ನು ತಿಳಿದು ಬಂದಿಲ್ಲ. ಅವರು ಚೇತರಿಸಿಕೊಳ್ಳಲು ಎಷ್ಟು ಸಮಯ ಬೇಕೆಂಬುದರ ಬಗ್ಗೆ ನಮಗೆ ತಿಳಿದಿಲ್ಲ ಎಂದು ಪ್ರತಿಕ್ರಿಯಿಸಿದ್ಧಾರೆ.
ಒಂದು ವೇಳೆ ಕೇನ್ ವಿಲಿಯಮ್ಸನ್ IPLಗೆ ಅಲಭ್ಯರಾದರೆ ಬದಲಿ ಆಟಗಾರರಾಗಿ ಆಸ್ಟ್ರೇಲಿಯಾದ ಬ್ಯಾಟ್ಸ್ಮ್ಯಾನ್ ಸ್ಟವೀವ್ ಸ್ಮಿತ್ ಅಥವಾ ಶ್ರೀಲಂಕಾದ ದಸುನ್ ಶನಕಾ ಅವರತ್ತ ಗುಜರಾತ್ ತಂಡ ಮುಖ ಮಾಡುವ ಸಾಧ್ಯತೆ ಹೆಚ್ಚಿದೆ.