More

    ಪ್ರೇಮವಿವಾಹ ಬೇರ್ಪಡಿಸುವ ಹಕ್ಕು ಕುಟುಂಬಕ್ಕಿಲ್ಲ!

    ನವದೆಹಲಿ: ಪ್ರೇಮ ವಿವಾಹದ ಕುರಿತು ದೆಹಲಿ ಹೈಕೋರ್ಟ್​ ಮಹತ್ವದ ತೀರ್ಪು ನೀಡಿದ್ದು. ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಗೂ ತಾನು ಇಷ್ಟಪಟ್ಟವರನ್ನು ಮದುವೆಯಾಗುವ ಹಕ್ಕನ್ನು ನೀಡಿದೆ. ಅಂತಹ ಮದುವೆಗಳನ್ನು ಕುಟುಂಬ ಸದಸ್ಯರು ವಿರೋಧಿಸುವಂತಿಲ್ಲ ಎಂದು ತಿಳಿಸಿದೆ.

    ಇತ್ತೀಚೆಗಷ್ಟೇ ಪ್ರೇಮ ವಿವಾಹವಾದ ಜೋಡಿಯೊಂದು ಕುಟುಂಬಸ್ಥರ ಬೆದರಿಕೆಯ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್​ನ ಮೊರೆ ಹೋಗಿತ್ತು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ದಂಪತಿಗೆ ಪೊಲೀಸ್​ ರಣೆ ನೀಡುವ ಸಂದರ್ಭದಲ್ಲಿ ಈ ಅಭಿಪ್ರಾಯ ನೀಡಿದೆ.

    ವಿಚಾರಣೆ ವೇಳೆ ನ್ಯಾಯಮೂರ್ತಿ ತುಷಾರ್​ ರಾವ್​ ಗೆಡೆಲಾ ಅವರು, ನಾಗರಿಕರಿಗೆ ಭದ್ರತೆ ಒದಗಿಸುವುದು ನಮ್ಮ ಸಾಂವಿಧಾನಿಕ ಜವಾಬ್ದಾರಿಯಾಗಿದೆ. ಅರ್ಜಿದಾರರು ತಮ್ಮ ಆಯ್ಕೆಯ ವ್ಯಕ್ತಿಯನ್ನು ಮದುವೆಯಾಗುವ ಹಕ್ಕನ್ನು ಕಸಿದುಕೊಳ್ಳಲಾಗದು ಮತ್ತು ಸಂವಿಧಾನದ ಅಡಿಯಲ್ಲಿ ರಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಅರ್ಜಿದಾರರ ಮದುವೆ ನಿಜವಾಗಿದ್ದು, ಇಬ್ಬರೂ ವಯಸ್ಕರಾಗಿದ್ದು, ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ. ಅವರ ಆಯ್ಕೆಯ ವ್ಯಕ್ತಿಯನ್ನು ಮದುವೆಯಾದ ನಂತರ, ಕುಟುಂಬಕ್ಕೆ ಅವರನ್ನು ಬೇರ್ಪಡಿಸುವ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts