More

    ಕೊಲೆ, ಗಲಭೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣ: ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ

    ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆ ಅಡಿ ಬಂಧಿಸಿದ್ದಾರೆ. ಪುನೀತ್ ವಿರುದ್ಧ ವಿವಿಧ ಪೊಲೀಸ್ ಠಾಣೆಯಲ್ಲಿ ಕೊಲೆ, ಗಲಭೆ ಸೇರಿದಂತೆ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿದೆ.

    ರಾಷ್ಟ್ರ ರಕ್ಷಣಾ ಪಡೆ ಹೆಸರಲ್ಲಿ ಗೋವು ಸಾಗಾಟ ಮಾಡುವವರನ್ನು ಟಾರ್ಗೆಟ್​ ಮಾಡಿ ಬೆದರಿಸಿ, ಸುಲಿಗೆ ಮಾಡುವುದೇ ಈತನ ದುರುದ್ದೇಶವಾಗಿದೆ. ಹಲವರಿಗೆ ಈತ ಬೆದರಿಕೆ ಹಾಕಿರುವುದಲ್ಲದೇ, ಸಮಾಜ ವಿರೋಧಿ ಚಟುವಟಿಕೆಯಲ್ಲಿ ಪದೇಪದೆ ಭಾಗಿಯಾಗುವ ಮೂಲಕ ಸಮಾಜದಲ್ಲಿ ಶಾಂತಿ, ಸುವ್ಯವಸ್ಥೆ ಕದಡುವ ಕೆಲಸ ಮಾಡಿದ್ದಾನೆ ಎಂಬ ಆರೋಪದ ಮೇಲೆ ಪುನೀತ್​ ವಿರುದ್ಧ ಕಳೆದ 10 ವರ್ಷಗಳಲ್ಲಿ ಹಲವು ಪ್ರಕರಣಗಳು ವಿವಿಧ ಪೊಲೀಸ್​ ಠಾಣೆಗಳಲ್ಲಿ ದಾಖಲಾಗಿವೆ.

    ಇದನ್ನೂ ಓದಿ: ಕೈ ಅಭ್ಯರ್ಥಿಗಳ ತಲಾಶ್ ಶುರು: ಲೋಕಸಭಾ ಚುನಾವಣೆಗೆ ತಯಾರಿ; ಶೀಘ್ರ ಸಂಭಾವ್ಯರ ಆಯ್ಕೆ

    ಆತನ ಸಮಾಜ ವಿರೋಧಿ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಕರ್ನಾಟಕ ಗೂಂಡಾ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡಿರುವ ಸಿಸಿಬಿ ಪೊಲೀಸರು ಪುನೀತ್​ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಆಗ್ರಹಾರ ಕಾರಗೃಹಕ್ಕೆ ಕಳಿಸಲಾಗಿದೆ.

    ಪುನೀತ್​ ಕೆರೆಹಳ್ಳಿ ವಿರುದ್ಧ ಮಳವಳ್ಳಿ, ಸಾತನೂರು, ಕಗ್ಗಲಿಪುರ, ಹಲಸೂರು ಗೇಟ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ ಡಿಜೆ ಹಳ್ಳಿ, ಬೇಗೂರು ಹಾಗೂ ಹಂಪಿ ಟೂರಿಸಂ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿವೆ. ಈ ಪ್ರಕರಣಗಳ ವಿಚಾರಣೆ ನಡೆಯುತ್ತಲೇ ಇದೆ. (ದಿಗ್ವಿಜಯ ನ್ಯೂಸ್​)

    ಬಾಹುಬಲಿ ಚಿತ್ರದ ಕಟ್ಟಪ್ಪ ಖ್ಯಾತಿಯ ನಟ ಸತ್ಯರಾಜ್​ಗೆ ಮಾತೃ ವಿಯೋಗ

    ಹುಡುಗನಕಿಂತಾ ಹುಡಗಿ ಭಾಳ ಸಣ್ಣೋಕಿ ಕಾಣ್ತಾಳ…

    ಕಮಿಷನ್ ಹಿಂದಲ್ಲ, ಭ್ರಷ್ಟರ ಹಿಂದೆ ಬಿದ್ದಿದ್ದೇವೆ: ಬಿಜೆಪಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು; ತನಿಖೆ ನಡೆದಿರುವಾಗ ಬಿಲ್ ಪಾವತಿ ಸಮಂಜಸವೇ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts