More

    ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಕರ್ತವ್ಯ

    ಬೆಳಗಾವಿ: ಸಮಾಜದಲ್ಲಿ ಇಂದಿಗೂ ಬಹಳಷ್ಟು ಜನರಿಗೆ ತಮ್ಮ ಹಕ್ಕುಗಳ ಅರಿವಿಲ್ಲದೆ ದೌರ್ಜನ್ಯ ಸಹಿಸಿಕೊಂಡು ಜೀವನ ನಡೆಸುತ್ತಿದ್ದಾರೆ. ಅಂತಹವರಿಗೆ ಅವರ ಹಕ್ಕಿನ ಅರಿವು ಮೂಡಿಸಿ ರಕ್ಷಣೆ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
    ಹೇಳಿದ್ದಾರೆ.

    ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆ, ಗೃಹ ರಕ್ಷಕದಳ ಮತ್ತು ಪೌರರಕ್ಷಣೆ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಗುರುವಾರ ಇಲ್ಲಿನ ಜಿಪಂ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮತ್ತು ಕರೊನಾ ಸೇನಾನಿಗಳ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.

    ಹಕ್ಕುಗಳಿಂದ ವಂಚಿತರಾದವರು, ಅತ್ಯಾಚಾರಕ್ಕೆ ಒಳಗಾದವರು, ಅಂಗವಿಕಲರು, ಬಾಲ ಕಾರ್ಮಿಕರು, ವಯೋವೃದ್ಧರು ಹಾಗೂ ಎಚ್‌ಐವಿ ಪೀಡಿತರನ್ನು ಎಲ್ಲರೂ ಸಹನಾಭೂತಿಯಿಂದ ಹಾಗೂ ಸಮಾನವಾಗಿ ಕಾಣಬೇಕು. ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಮುಖ್ಯ ಉದ್ದೇಶ ಹಕ್ಕುಗಳನ್ನು ಪಡೆದುಕೊಳ್ಳುವುದೇ ಆಗಿದೆ ಎಂದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಗೌರವ ಕಾರ್ಯದರ್ಶಿ ವಿಜಯ ದೇವರಾಜ ಅರಸ, ಸಂವಿಧಾನ ನಮ್ಮೆಲ್ಲರಿಗೂ ಸಮಾನ ಹಕ್ಕು ನೀಡಿದೆ. ಅವುಗಳ ಉಲಂಘನೆಯಾದರೆ ನ್ಯಾಯಾಲಯದ ಮೊರೆ ಹೋಗಬಹುದು ಎಂದರು. ಕರೊನಾ ಸೇನಾನಿಗಳಿಗೆ ರೆಡ್‌ಕ್ರಾಸ್ ಸಂಸ್ಥೆಯಿಂದ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ರೆಡ್‌ಕ್ರಾಸ್ ಜಿಲ್ಲಾ ಶಾಖೆ ಅಧ್ಯಕ್ಷ ಅಶೋಕ ಬದಾಮಿ, ಡಾ.ಕಿರಣ ನಾಯ್ಕ, ಡಾ.ಡಿ.ಎನ್.ಮಿಸಾಳೆ, ಪ್ರಾಧಿಕಾರದ ಸಿಬ್ಬಂದಿ ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಮುಂಚೆ ರೆಡ್ ಕ್ರಾಸ್ ಸ್ವಯಂಸೇವಕರು, ಗೃಹರಕ್ಷಕ ದಳದವರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ಕೋವಿಡ್-19 ನಿಯಂತ್ರಣ ಜಾಗೃತಿ ಜಾಥಾಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಚಾಲನೆ ನೀಡಿದರು. ಜಾಥಾವು ಕಿತ್ತೂರ ಚನ್ನಮ್ಮ ವೃತ್ತದ ಮೂಲಕ ಜಿಪಂ ಕಚೇರಿ ತಲುಪಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts