ಪ್ಲಾಸ್ಟಿಕ್ ಸರ್ಜರಿ ಮಾಡಿಸಿಲ್ಲ!: ಬಾಲಿವುಡ್ ನಟಿ ರಿಮಿ ಸೇನ್ ಉತ್ತರ

ಬೆಂಗಾಲಿ ಚಿತ್ರ ‘ದಾಮು’ ಮೂಲಕ 1996ರಲ್ಲಿ ಬಣ್ಣದ ಲೋಕಕ್ಕೆ ಪದಾರ್ಪಣೆ ಮಾಡಿದ ನಟಿ ರಿಮಿ ಸೇನ್, ನಂತರ ತೆಲುಗು ಹಾಗೂ ಹಿಂದಿಯಲ್ಲಿ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, 2016ರಲ್ಲಿ ತೆರೆಕಂಡಿದ್ದ ‘ಭುದಿಯಾ ಸಿಂಗ್ : ಬಾರ್ನ್ ಟು ರನ್’ ಬಳಿಕ ರಿಮಿ ಮತ್ತೆ ತೆರೆ ಮೇಲೆ ಕಾಣಿಸಿಕೊಂಡಿಲ್ಲ. ಎಂಟು ವರ್ಷಗಳಿಂದ ಚಿತ್ರರಂಗದಿಂದ ದೂರ ಇದ್ದಾರೆ. ಆಗಾಗ, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಫೋಟೋ, ಮಾಹಿತಿ ಹಂಚಿಕೊಳ್ಳುತ್ತಾರೆ. ಇಂತಹದ್ದೇ ಫೋಟೋ ಹಂಚಿಕೊಂಡಿದ್ದ ರಿಮಿಗೆ ಕೆಲವರು ಪ್ಲಾಸ್ಟಿಕ್ ಸರ್ಜರಿ’ ಮಾಡಿಸಿಕೊಂಡಿರಬಹುದು ಎಂದು ಕಮೆಂಟ್ ಮಾಡಿದ್ದಾರಂತೆ. ಇದಕ್ಕೆ ತಕ್ಷಣವೇ ನಟಿ ಉತ್ತರಿಸಿದ್ದಾರೆ. ‘ನಾನು ಯಾವುದೇ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಂಡಿಲ್ಲ. ನನ್ನ ಮುಖದ ಹೊಳಪು ನೋಡಿ ಕೆಲವರು ಹಾಗೇ ಹೇಳಿದ್ದಾರೆ. ಇದಕ್ಕಾಗಿ ನಾನು ಬೋಟಾಕ್ಸ್ ಹಾಗೂ ಪಿಆರ್‌ಪಿ ಚಿಕಿತ್ಸೆ ಪಡೆಯುತ್ತೇನೆ. ನನಗೆ ಪ್ಲಾಸ್ಟಿಕ್ ಸರ್ಜರಿ ಮಾಡಿಸಿಕೊಳ್ಳುವ ಅಗತ್ಯವಿಲ್ಲ. ಫೇಸ್‌ಲಿಫ್ಟ್​ ಚಿಕಿತ್ಸೆ ಮಾಡಿಸಿಕೊಳ್ಳಬೇಕು ಎಂದುಕೊಂಡಿದ್ದೇನೆ. ಅದಕ್ಕಾಗಿ ದೇಶದಲ್ಲಿಯೇ ತಜ್ಞ ವೈದ್ಯರಿದ್ದಾರೆ. ಬೇರೆ ಕಡೆ ಹೋಗಬೇಕು ಎಂದೇನಿಲ್ಲ. ಆದರೆ, ಇದು ಸದ್ಯ ಅಲ್ಲ, ನನಗೆ 50 ವರ್ಷ ದಾಟಿದ ಮೇಲೆ ಫೇಸ್‌ಲಿಫ್ಟ್​ ಮಾಡಿಸಿಕೊಳ್ಳುತ್ತೇನೆ’ ಎಂದಿದ್ದಾರೆ. – ಏಜೆನ್ಸೀಸ್

Share This Article

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…

ಈ ದಿನಾಂಕದಂದು ಜನಿಸಿದವರು ದಾನದಲ್ಲಿ ಕರ್ಣನನ್ನು ಮೀರಿಸುತ್ತಾರೆ! ನೀವೂ ಹುಟ್ಟಿದ್ದು ಇದೇ ದಿನಾನಾ?

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಗೋಲ್ಡನ್ ಅವರ್ ರಹಸ್ಯ: ಮುಂಜಾನೆ ಬೇಗ ಏಳುವುದರಿಂದ ಇದೆ 6 ಪ್ರಯೋಜನಗಳು

 ಬೆಂಗಳೂರು: ಮನೆಯಲ್ಲಿ ಕೆಲವರು ಸೂರ್ಯೋದಯಕ್ಕೂ ಮೊದಲೇ ಏಳುವ ಅಭ್ಯಾಸ ಇಟ್ಟುಕೊಂಡಿರುತ್ತಾರೆ. ಮುಂಜಾನೆ ಬೇಗ ಏಳುವುದನ್ನು ರೂಢಿ…