25.9 C
Bengaluru
Wednesday, January 22, 2020

ರಿಂಗ್​ರಸ್ತೆ ಮತ್ತೆ ಮುನ್ನೆಲೆಗೆ

Latest News

ತಾಪಂ ಆಡಳಿತ ಶೀಘ್ರ ಕಾರ್ಯಾರಂಭ

ಅಜ್ಜಂಪುರ: ತಾಪಂ ಆಡಳಿತ ಕಾರ್ಯ ಶೀಘ್ರ ಆರಂಭಿಸಲಾಗುವುದು. ಇದಕ್ಕೆ ಪೂರಕವಾಗಿ ಅಜ್ಜಂಪುರ ವ್ಯಾಪ್ತಿಯ ತಾಲೂಕು ಪಂಚಾಯಿತಿ ಸದಸ್ಯರನ್ನು ತರೀಕೆರೆಯಿಂದ ಪ್ರತ್ಯೇಕಿಸುವ ಕಾರ್ಯ ಪ್ರಗತಿಯಲ್ಲಿದೆ...

ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಿಗಿ ಭದ್ರತೆ

ಚಿಕ್ಕಮಗಳೂರು: ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಘಟನೆ ಹಿನ್ನೆಲೆಯಲ್ಲಿ ಪ್ರಮುಖ ಧಾರ್ವಿುಕ ಕ್ಷೇತ್ರಗಳಾದ ಶೃಂಗೇರಿ, ಹೊರನಾಡು, ಬಾಬಾಬುಡನ್​ಗಿರಿ, ಮುಳ್ಳಯ್ಯನಗಿರಿ, ಭದ್ರಾ ಅಣೆಕಟ್ಟೆ ಪ್ರದೇಶದಲ್ಲಿ ಪೊಲೀಸ್...

ದೊರೆತ ಉದ್ಯೋಗದಲ್ಲೇ ನಿಷ್ಠೆ ತೋರಿ: ಉದ್ಯೋಗ ಮೇಳದಲ್ಲಿ ಅಭ್ಯರ್ಥಿಗಳಿಗೆ ಶಾಸಕ ಎಸ್.ವಿ ರಾಮಚಂದ್ರ ಸಲಹೆ

ಜಗಳೂರು: ಸರ್ಕಾರಿ ಕೆಲಸಕ್ಕೆ ಅಲಂಬಿತರಾಗದೇ ಸಿಕ್ಕ ಉದ್ಯೋಗವನ್ನು ನಿಷ್ಠೆಯಿಂದ ಮಾಡಿದರೆ ಮುಂದೆ ಅವಕಾಶದ ಬಾಗಿಲುಗಳು ತೆರೆಯುತ್ತವೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಹೇಳಿದರು. ಇಲ್ಲಿನ...

ಕೋತಿ ಹಾವಳಿಗೆ ಹಣ್ಣಿನ ಗಿಡ ಮದ್ದು

ಚಿಕ್ಕಮಗಳೂರು: ಕಡೂರಿನ ಹಲವೆಡೆ ತಲೆದೋರಿರುವ ಮಂಗಗಳ ಹಾವಳಿ ತಡೆಗೆ ಗ್ರಾಮಗಳ ಹೊರಭಾಗದಲ್ಲಿ ಹಣ್ಣಿನ ಸಸಿಗಳನ್ನು ನೆಟ್ಟು ಬೆಳೆಸುವ ಮೂಲಕ ಅವುಗಳನ್ನು ಆಕರ್ಷಿಸಬಹುದು. ಈ...

ಕರೋನಾ ವೈರಸ್​ ಪತ್ತೆ ಮಾಡಲು ಕೇರಳದ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್​ ಕೇಂದ್ರಗಳ ಸ್ಥಾಪನೆ

ತಿರುವನಂತಪುರ: ಕರೋನಾ ವೈರಸ್​ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ಸಲಹೆ ಮೇರೆಗೆ ಕೇರಳದ ವಿಮಾನ ನಿಲ್ದಾಣಗಳಲ್ಲಿ ವೈರಸ್​ ಪತ್ತೆ ಮಾಡುವ ಸ್ಕ್ರೀನಿಂಗ್​ ಕೇಂದ್ರಗಳನ್ನು ಸ್ಥಾಪಿಸಲಾಗಿದೆ...

ಬೆಂಗಳೂರು: ನಗರದೊಳಗಿನ ವಾಹನದಟ್ಟಣೆ ಕಡಿಮೆ ಮಾಡಲು ಉಪನಗರಗಳನ್ನು ಸಂರ್ಪಸುವ ವರ್ತಲ ರಸ್ತೆ ನಿರ್ಮಾಣ ಕುರಿತ 13 ವರ್ಷದ ಹಿಂದಿನ ಯೋಜನೆ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡಲು ಬೆಂಗಳೂರು ಹೊರಭಾಗದ ನಗರಗಳ ನಡುವೆ ಸಂಪರ್ಕ ಏರ್ಪಡಿಸಲು ಉಪನಗರ ರಿಂಗ್ ರಸ್ತೆ ಯೋಜನೆಯನ್ನು 2006ರಲ್ಲೇ ರಾಜ್ಯ ಸರ್ಕಾರ ಸಿದ್ಧಪಡಿಸಿತ್ತು. ಆದರೆ, ಅನುದಾನ ಕೊರತೆ ಸೇರಿ ಇನ್ನಿತರ ಕಾರಣಗಳಿಂದಾಗಿ ಆ ಯೋಜನೆ ನನೆಗುದಿಗೆ ಬಿದ್ದಿತ್ತು. ಆದರೀಗ ಈ ಯೋಜನೆ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜತೆ ರ್ಚಚಿಸಿದ್ದಾರೆ. ಅಲ್ಲದೆ, ಅನುದಾನ ಒದಗಿಸುವ ಭರವಸೆಯನ್ನೂ ನೀಡಿದ್ದಾರೆ.

ಹೆಚ್ಚಾಗಲಿದೆ ಯೋಜನಾ ವೆಚ್ಚ: ಬೆಂಗಳೂರು ಹೊರವಲಯದಲ್ಲಿನ 9 ನಗರಗಳಿಗೆ ಸಂಪರ್ಕ ಕಲ್ಪಿಸುವ ಯೋಜನೆ ಇದಾಗಿದೆ. ಬೆಂಗಳೂರು ಮಹಾನಗರ ಪ್ರಾದೇಶಿಕ ಅಭಿವೃದ್ಧಿ ಪ್ರಾಧಿಕಾರ ಇದನ್ನು ಸಿದ್ಧಪಡಿಸಿದೆ. ಆದರೆ, ಕಾರಣಾಂತರಗಳಿಂದಾಗಿ ಯೋಜನೆ ಅನುಷ್ಠಾನಗೊಳ್ಳುವಲ್ಲಿ ಹಿನ್ನಡೆಯುಂಟಾಗಿತ್ತು. ಈ ಯೋಜನೆಯ ಅಂದಾಜು ವೆಚ್ಚ 3,800 ಕೋಟಿ ರೂ.ಗೆ ನಿಗದಿಯಾಗಿದೆ. ಇದು 13 ವರ್ಷದ ಹಿಂದಿನ ಅಂದಾಜಾಗಿದೆ. ಈಗ ಇದು ಹೆಚ್ಚಾಗುವುದು ನಿಶ್ಚಿತವಾಗಿದೆ.

262 ಕಿ.ಮೀ. ಉದ್ದದ ರಿಂಗ್ ರಸ್ತೆ: ಯೋಜನೆಯಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರಾಜ್ಯ ನಗರಾಭಿವೃದ್ದಿ ಇಲಾಖೆ ಜಂಟಿಯಾಗಿ ಒಟ್ಟು 262 ಕಿ.ಮೀ. ಉದ್ದದ ರಿಂಗ್​ರಸ್ತೆಯನ್ನು ನಿರ್ವಿುಸಲಿವೆ. 90 ಮೀಟರ್ ಅಗಲದ ನಾಲ್ಕು ಪಥದ ಮುಖ್ಯ ರಸ್ತೆ ಹಾಗೂ ಎರಡು ಬದಿಯಲ್ಲಿ ಸರ್ವೀಸ್ ರಸ್ತೆಗಳನ್ನು ನಿರ್ವಿುಸಲಾಗುತ್ತದೆ. ಅಲ್ಲದೆ, ಈ ರಸ್ತೆಯು159 ಹಳ್ಳಿಗಳಲ್ಲಿ ಹಾದುಹೋಗಲಿದೆ.

ಪ್ರತ್ಯೇಕ ಪ್ರಾಧಿಕಾರ?: ಯೋಜನೆಗೆ ಮರುಚಾಲನೆ ನೀಡಲು ಮುಂದಾಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪ್ರತ್ಯೇಕ ಪ್ರಾಧಿಕಾರ ರಚಿಸುವ ಚಿಂತನೆ ನಡೆಸಿವೆ. ಈ ಹಿಂದೆಯೇ ಈ ಬಗ್ಗೆ ಚರ್ಚೆಗಳಾಗಿದ್ದವು. ಆದರೆ, ಅದು ಜಾರಿಯಾಗಿರಲಿಲ್ಲ. ಯೋಜನೆ ಅನುಷ್ಠಾನ, ಬೇಕಾಗುವ ಅನುದಾನ, ಭೂಸ್ವಾಧೀನ ಪ್ರಕ್ರಿಯೆ ಸೇರಿ ಮತ್ತಿತರ ಕಾರ್ಯಗಳನ್ನು ಪ್ರಾಧಿಕಾರ ಮಾಡಲಿದೆ.

ದಾಬಸ್​ಪೇಟೆಯಿಂದ ದಾಬಸ್​ಪೇಟೆಗೆ: ಉಪನಗರ ವರ್ತಲರಸ್ತೆ ಯೋಜನೆಯ ಪ್ರಕಾರ ದಾಬಸ್​ಪೇಟೆ, ಮಾಗಡಿ, ರಾಮನಗರ, ಕನಕಪುರ, ಆನೇಕಲ್, ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ, ದಾಬಸ್​ಪೇಟೆಗೆ ಸಂಪರ್ಕ ಕಲ್ಪಿಸಲಾಗುತ್ತದೆ. ಈ ನಗರಗಳ ಮೂಲಕ ಹತ್ತಿರದ ಉಪನಗರಗಳಿಗೆ ಬೈಪಾಸ್ ನಿರ್ವಿುಸುವ ಯೋಜನೆಯೂ ಇದರಲ್ಲಿ ಸೇರಿದೆ.

ಮತ್ತಷ್ಟು ಪೂರಕ ಯೋಜನೆಗಳು: ಉಪನಗರ ರಿಂಗ್​ರಸ್ತೆಗೆ ಪೂರಕವಾಗಿ ಬೆಂಗಳೂರು ಹೊರವಲಯಗಳಲ್ಲಿ ಸಂಚಾರದಟ್ಟಣೆ ಕಡಿಮೆ ಮಾಡಲು ಮಧ್ಯಂತರ ರಿಂಗ್​ರಸ್ತೆ, ನಗರ ರಿಂಗ್​ರಸ್ತೆ, ರೇಡಿಯಲ್ ರಸ್ತೆಗಳ ನಿರ್ವಣದ ಯೋಜನೆಗಳನ್ನು ರೂಪಿಸಲಾಗಿತ್ತು. ಅವುಗಳು ಕೂಡ ಅನುಷ್ಠಾನಗೊಳ್ಳದೆ ನನೆಗುದಿಗೆ ಬಿದ್ದಿವೆ.

 

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...