16 C
Bangalore
Saturday, December 7, 2019

ರಿಂಗ್ ರಸ್ತೆ, ನದಿ ತೀರ ಒತ್ತುವರಿ

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಶ್ರೀಪತಿ ಹೆಗಡೆ ಹಕ್ಲಾಡಿ ಕುಂದಾಪುರ
ಕುಂದಾಪುರ ಪುರಸಭೆ ವ್ಯಾಪ್ತಿಯ ರಿಂಗ್‌ರೋಡ್ ಪರಿಸರ ಉಳ್ಳವರ ಪಾಲಾಗುತ್ತಿದೆ. ಹಾಲಾಡಿ ಹೊಳೆ ಸೇರುವ ಮತ್ತು ಸಮುದ್ರ ಹಿನ್ನೀರು ಪ್ರದೇಶದ ಎಕರೆಗಟ್ಟಲೆ ಪ್ರದೇಶ ಹೆಂಚು ಮತ್ತು ತ್ಯಾಜ್ಯದಿಂದ ಮುಚ್ಚಿಹೋಗಿವೆ. ಹಲವೆಡೆ ಮರ ಕತ್ತರಿಸುವ ಮಿಲ್‌ಗಳ ಮಾಲೀಕರು ದಿಮ್ಮಿ ಸಂಗ್ರಹಿಸುವ ಉದ್ದೇಶದಿಂದ ನದಿ ತೀರಕ್ಕೆ ದಂಡೆ ಕಟ್ಟಿ ಮಣ್ಣು ತುಂಬುವ ಕೆಲಸ ಮಾಡುತ್ತಿದ್ದಾರೆ.

ಫೆರ‌್ರಿ ರಸ್ತೆ ಪಾರ್ಕ್ ಸಮೀಪದಲ್ಲಿರುವ ಹೆಂಚಿನ ಕಾರ್ಖಾನೆಯೊಂದು ಬಾಕಿಯಾದ ಹೆಂಚಿನ ತುಂಡು ಮತ್ತು ಕೊಜೆ ಮಣ್ಣಿನ ತ್ಯಾಜ್ಯವನ್ನು ನದಿಗೆ ಸುರಿದು ಅರ್ಧಕ್ಕರ್ಧ ನದಿ ತೀರ ಮುಚ್ಚಿ ಹಾಕಿದೆ. ಫೆರ‌್ರಿ ರಸ್ತೆಯಲ್ಲಿ ಬರುವ ಮತ್ತೆರಡು ಮರದ ಕಾರ್ಖಾನೆಗಳು ಸಹ ಒತ್ತುವರಿ ಮಾಡಿಕೊಂಡಿವೆ.

ನದಿ ಮತ್ತು ಜಲಾನಯನ ಪ್ರದೇಶಗಳನ್ನು ಅತಿಕ್ರಮ ಮಾಡಿಕೊಳ್ಳುವುದು ಕಾನೂನು ಬಾಹಿರ. ನದಿ ಪಾತ್ರಗಳಲ್ಲಿ ಅರಣ್ಯ ಇಲಾಖೆ ವತಿಯಿಂದ ನಾಟಿ ಮಾಡಿದ ಕಾಂಡ್ಲಾ ಗಿಡಗಳನ್ನು ಕಡಿದು ನದಿ ದಡ ತುಂಬುವ ಕೆಲಸ ನಡೆಯುತ್ತಿದ್ದರೂ ಕ್ರಮ ಕೈಗೊಂಡಿಲ್ಲ. ಸಿಆರ್‌ಝಡ್ ನಿಯಮಗಳು ಇವರಿಗೆ ಅನ್ವಯಿಸುವುದಿಲ್ಲವೇ ಎನ್ನುವುದು ಸ್ಥಳೀಯರ ಪ್ರಶ್ನೆ.

ಪ್ರಾಕೃತಿಕ ವರ್ತುಲ ಏರುಪೇರು
ನದಿ ಮತ್ತು ಸಮುದ್ರ ತೀರದ ಒತ್ತುವರಿ ಕಿಂಡಿ ಅಣೆಕಟ್ಟು ಸಿಗಡಿ ಕೆರೆ ನಿರ್ಮಾಣದಿಂದ ಪ್ರಾಕೃತಿಕ ವರ್ತುಲ ಏರು ಪೇರಾಗುತ್ತಿದೆ.ಹಿನ್ನೀರು ಸರಾಗ ಹರಿದಾಡಲು ಅಡ್ಡಿಯಾದ ಪರಿಣಾಮ ಕೃಷಿ ಭೂಮಿಗೆ ಉಪ್ಪುನೀರು ನುಗ್ಗಿ ಫಲವತ್ತಾದ ಭೂಮಿ ಬರಡಾಗುತ್ತಿದೆ. ಈಗಾಗಲೇ ನೂರಾರು ಎಕರೆ ಕೃಷಿ ಭೂಮಿ ಫಲವತ್ತತೆ ಕಳೆದುಕೊಂಡಿದೆ. ಜಿಲ್ಲಾಡಳಿತ ಅತಿಕ್ರಮಕ್ಕೆ ಕಡಿವಾಣ ಹಾಕಿದಿದ್ದರೆ ಭೂಮಿ ಬಂಜೆಯಾಗುವ ಅಪಾಯವಿದೆ.

ರಿಂಗ್ ರಸ್ತೆ ಪರಿಸರ ಒತ್ತುವರಿ ಬಗ್ಗೆ ಕುಂದಾಪುರ ಎಸಿ ಡಾ.ಎಸ್.ಎಸ್.ಮಧುಕೇಶ್ವರ್ ಜತೆ ಚರ್ಚೆ ಮಾಡಲಾಗಿದ್ದು, ರಸ್ತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಸರ್ಕಾರಿ ಭೂಮಿ ಎತ್ತುವರಿಯನ್ನು ಸರ್ವೇ ಮಾಡಿ ಗಡಿ ಗುರುತು ಮಾಡಲಾಗುತ್ತದೆ. ಈ ಕುರಿತು ಶಾಸಕರ ಗಮನಕ್ಕೂ ತಂದಿದ್ದು ಅನುದಾನ ಒದಗಿಸಿಕೊಡುವ ಭರವಸೆ ನೀಡಿದ್ದಾರೆ. ಬರ ಪರಿಹಾರದಲ್ಲಿ 60 ಲಕ್ಷ ಅನುದಾನವಿದ್ದು, ಸಂಗಮದಿಂದ ಹೊಳೆ ಅಂಚಿನ ತನಕ 20 ಲಕ್ಷ ರೂ. ವೆಚ್ಚದಲ್ಲಿ ಸರ್ವಋತು ರಸ್ತೆ ಮಾಡಲಾಗುತ್ತದೆ.
ಗೋಪಾಲಕೃಷ್ಣ ಶೆಟ್ಟಿ, ಮುಖ್ಯ ಅಧ್ಯಕ್ಷರಿ, ಪುರಸಭೆ ಕುಂದಾಪುರ

ಸರ್ವೇ ನಡೆಸಿದರೆ ರಿಂಗ್ ರಸ್ತೆ ಒತ್ತುವರಿ ಸಮಸ್ಯೆ ಪರಿಹಾರ ಸಾಧ್ಯ. ಮೇಲ್ನೋಟಕ್ಕೆ ಒತ್ತುವರಿ ಕಂಡು ಬರುತ್ತದೆ. ನಮ್ಮ ಅವಧಿಯಲ್ಲಿ ಒತ್ತುವರಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ಪುರಸಭೆ ಹಾಗೂ ಇಲಾಖೆ ಕೌನ್ಸಿಲರ್‌ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಪರಿಹರಿಸಬಹುದು.
ಮೋಹನದಾಸ್ ಶೆಣೈ, ಮಾಜಿ ಅಧ್ಯಕ್ಷ, ಪುರಸಭೆ ಕುಂದಾಪುರ.

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...