More

    ನಾನು ಹುಟ್ಟಿ ಬೆಳೆದ ಮನೆಯನ್ನು ಸುಟ್ಟು‌ ಹಾಕಿದ್ದಾರೆ… ಗಲಭೆಕೋರರಿಗೆ ಕಠಿಣ ಶಿಕ್ಷೆ ಆಗಲೇ ಬೇಕು: ಅಖಂಡ ಶ್ರೀನಿವಾಸಮೂರ್ತಿ

    ಬೆಂಗಳೂರು: ನಮ್ಮ ಮನೆ ಮೇಲೆ ಸುಮಾರು ನಾಲ್ಕು ಸಾವಿರ ಜನ ದಾಳಿ ಮಾಡಿದ್ದಾರೆ. ಮಾರಕಾಸ್ತ್ರ, ಪೆಟ್ರೋಲ್ ‌ಬಾಂಬ್ ಬಳಸಿ ಮನೆಗೆ ಬೆಂಕಿ ಹಚ್ಚುವ ಕೃತ್ಯ ಮಾಡಿದ್ದಾರೆ. ಘಟನೆಗೆ ಕಾರಣರಾದವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಹೇಳಿದರು.

    ಡಿಜೆ ಹಳ್ಳಿಯಲ್ಲಿ ನಿನ್ನೆ(ಮಂಗಳವಾರ) ರಾತ್ರಿ ಸಂಭವಿಸಿದ ದಾಂಧಲೆಯಲ್ಲಿ ವಾಸವಿದ್ದ ಮನೆಯನ್ನೇ ಕಳೆದುಕೊಂಡ ಶಾಸಕರು ಈ ಬಗ್ಗೆ ಇಂದು ಮಧ್ಯಾಹ್ನ (ಬುಧವಾರ) ವಿಧಾನಸೌಧದಲ್ಲಿ ಮಾತನಾಡಿದರು. ನಾವು 50 ವರ್ಷದಿಂದ ಬಾಳಿ ಬದುಕಿದ ಮನೆ ಅದು. ನಮ್ಮ ತಂದೆ ತಾಯಿ ಕಟ್ಟಿದ ಮನೆ. ಅದನ್ನು ಸುಟ್ಟು ಹಾಕಿದ್ದಾರೆ. ಶಾಸಕನಾಗಿ ನನಗೇ ರಕ್ಷಣೆ ಇಲ್ಲ ಎಂದು ಕಣ್ಣೀರು ಹಾಕಿದರು. ಕಳೆದ 25 ವರ್ಷದಿಂದ ಇಂತಹ ಘಟನೆ ನಡೆದಿರಲಿಲ್ಲ. ಇದರ ಹಿಂದೆ ಯಾರೇ ಇದ್ದರೂ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.

    ಇದನ್ನೂ ಓದಿರಿ ಡಿಜೆ ಹಳ್ಳಿ ಗಲಭೆಯಲ್ಲಿ 15ಕ್ಕೂ ಹೆಚ್ಚು ಜನರಿಗೆ ಗುಂಡೇಟು, ಗಾಯಗೊಂಡವರು ಮನೆಯಲ್ಲೇ ಅಡಗಿದ್ದಾರೆ…

    ನಮ್ಮ ಮನೆಯಲ್ಲಿ ಚಿನ್ನಾಭರಣ ಲೂಟಿ ಮಾಡಿದ್ದಾರೆ. ಸಚಿವ ಅಶೋಕ್ ಮನೆಗೆ ಬಂದು ನಮಗೆ ಧೈರ್ಯ ಹೇಳಿದ್ದಾರೆ. ನಮಗೆ ಸೂಕ್ತ ಭದ್ರತೆ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಘಟನೆ ಬಗ್ಗೆ ಸಿಬಿಐ, ಸಿಐಡಿ ಸೇರಿದಂತೆ ಯಾವುದೇ ತನಿಖೆ ನಡೆಸಲಿ. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆಯಾಗಬೇಕು. ನನಗೆ ನನ್ನ ಕುಟುಂಬಕ್ಕೆ ರಕ್ಷಣೆ ನೀಡಲು ಮನವಿ ಮಾಡಿದ್ದೇನೆ. ನವೀನ್ ನನ್ನ ಅಕ್ಕನ ಮಗ. ಅವನಿಗೂ ನಮಗೂ ಯಾವುದೇ ಸಂಪರ್ಕವಿಲ್ಲ. ಘಟನೆಯ ಹಿಂದೆ ಯಾರೇ ಇದ್ದರೂ ಶಿಕ್ಷೆಯಾಗಬೇಕು ಎಂದು ಹೇಳಿದರು.

    ಡಿ.ಜೆ.ಹಳ್ಳಿ ಗಲಭೆ ಕುರಿತು ಕಾಂಗ್ರೆಸ್​ ನಾಯಕರು ಹೇಳಿದ್ದೇನು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts