More

    ಶಿವಮೊಗ್ಗದಲ್ಲಿ ಈದ್​ ಮೆರವಣಿಗೆ ವೇಳೆ ಘರ್ಷಣೆ; 144 ಸೆಕ್ಷನ್ ಜಾರಿ

    ಶಿವಮೊಗ್ಗ: ಈದ್​ ಮಿಲಾದ್​ ಮೆರವಣಿಗೆ ವೇಳೆ ಕಟೌಟ್​ ವಿಚಾರವಾಗಿ ಶುರುವಾದ ವಾಗ್ವಾದ ಹಿಂಸಾ ರೂಪಕ್ಕೆ ತಿರುಗಿರುವ ಘಟನೆ ಶಿವಮೊಗ್ಗದ ರಾಗಿಗುಡ್ಡ-ಶಾಂತಿನಗರ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

    ಘಟನೆ ನಡೆದ ಪ್ರದೇಶದಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಪೊಲೀಸರು ಮುಂಜಾಗ್ರತಾ ಕ್ರಮವಾಗಿ 144 ಸೆಕ್ಷನ್​ ಜಾರಿ ಮಾಡಿದ್ದಾರೆ.

    ಇದನ್ನೂ ಓದಿ: ಮಣಿಪುರ ವಿದ್ಯಾರ್ಥಿಗಳ ಹತ್ಯೆ ಪ್ರಕರಣ; ಕುಕಿ ಸಮುದಾಯದ ನಾಲ್ವರ ಬಂಧನ

    ಈದ್​ ಮಿಲಾದ್​ ಅಂಗವಾಗಿ ಶಿವಮೊಗ್ಗದಲ್ಲಿ ಬೃಹತ್​ ಮಟ್ಟದಲ್ಲಿ ಮೆರವಣಿಗೆಯನ್ನು ಆಯೋಜನೆ ಮಾಡಲಾಗಿತ್ತು. ಮೆರವಣಿಗೆ ರಾಗಿಗುಡ್ಡ ತಲುಪಿದ ವೇಳೆ ಕಟೌಟ್​ ವಿಚಾರವಾಗಿ ಹಿಂದೂ ಹಾಗೂ ಮುಸ್ಲಿಂ ಸಮುದಾಯದವರ ನಡುವೆ ಮಾತಿನ ಚಕಮಕಿ ಉಂಟಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಘರ್ಷಣೆಯಾಗಿದೆ. ಈ ವೇಳೆ ಕೆಲ ವ್ಯಕ್ತಿಗಳು ಮೆರವಣಿಗೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

    ಎರಡು ಕೋಮಿನ ಯುವಕರ ಗುಂಪಿನಿಂದ ಕಲ್ಲು ತೂರಾಟ ನಡೆದ ಪರಿಣಾಮ 7ಕ್ಕೂ ಹೆಚ್ಚು ಕಾರುಗಳು ಹಾಗೂ ಮನೆಯ ಕಿಟಕಿ ಗಾಜುಗಳು ಜಖಂಗೊಂಡಿವೆ. ಕಲ್ಲು ತೂರಾಟದಿಂದ ಕೆಲವರಿಗೆ ಗಂಭೀರ ಗಾಯಗಳು ಸಹ ಆಗಿವೆ. ಘಟನೆಯಲ್ಲಿ 35ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆಯಲಾಗಿದ್ದು, ಮತ್ತಷ್ಟು ಜನರನ್ನು ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts