ಸ್ಯಾಂಡಲ್ವುಟ್ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪ್ರಗತಿ ದಂಪತಿ ತಮ್ಮ ಎರಡನೇ ಮಗುವಿಗೆ ಇಂದು, ಮಾರ್ಚ್ 4 ರಂದು ಜನ್ಮ ನೀಡಿದ್ದಾರೆ. ಈ ಸಿಹಿ ಸುದ್ದಿಯನ್ನು ಸ್ವತ: ನಟ ರಿಷಬ್ ಶೆಟ್ಟಿ ಅಭಿಮಾನಿಗಳಿಗೆಂದು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹೊಸ ವರ್ಷದ ದಿನದಂದು ನಟ ರಿಷಬ್ ಶೆಟ್ಟಿ, ಪ್ರಗತಿ ತಾವು ಎರಡನೇ ಮಗುವಿಗೆ ತಾಯಿಯಾಗುತ್ತಿರುವ ಸುದ್ದಿಯನ್ನು ಬಹಿರಂಗ ಪಡಸಿದರು. ರಿಷಬ್ ಶೆಟ್ಟಿ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, 'ಗರುಡ ಗಮನ ವೃಷಭ ವಾಹನ' ಚಿತ್ರ ನಿರೀಕ್ಷೆಗೂ ಮೀರಿ ಸೂಪರ್ ಡೂಪರ್ ಹಿಟ್ ಆಗಿರುವ ಈ ಸಂತಸದ ಸಮಯದಲ್ಲಿ ರಿಷಬ್ ಶೆಟ್ಟಿ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ.