250 ದಿನಗಳ 'ಕಾಂತಾರ ಚಾಪ್ಟರ್ 1' ಶೂಟಿಂಗ್ ಮುಗಿಸಿದ ರಿಷಬ್ ಶೆಟ್ಟಿ| kantara

kantara
Published on

kantara; ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸುತ್ತಿರುವ ‘ಕಾಂತಾರ ಚಾಪ್ಟರ್ 1’ ಸಿನಿಮಾದ ಶೂಟಿಂಗ್ ಇದೀಗ ಪೂರ್ಣಗೊಂಡಿದ್ದು, ಈ ಮೂಲಕ ಸಿನಿಮಾ ಬಿಡುಗಡೆಗೆ ಮತ್ತಷ್ಟು ಸನಿಹವಾಗಿದೆ.

ಇದೀಗ ಚಿತ್ರೀಕರಣವನ್ನು ಮುಗಿಸಿರುವ ಬಗ್ಗೆ 'ಕಾಂತಾರ - 1 ಸ್ಪೆಷಲ್ ವಿಡಿಯೋದಲ್ಲಿ ರಿಷಬ್ ಶೆಟ್ಟಿ ಮಸ್ತ್ ಆಗಿ ಬಾಡಿಯನ್ನು ಬಿಲ್ಡ್ ಮಾಡಿರುವುದನ್ನು ಆರಂಭದಲ್ಲಿ ತೋರಿಸಲಾಗಿದೆ.  ಜೊತೆಗೆ ಚಿತ್ರೀಕರಣದ ಮೇಕಿಂಗ್ ವಿಡಿಯೋವನ್ನು ತೋರಿಸಲಾಗಿದ್ದು, ಹಿನ್ನೆಲೆಯಲ್ಲಿ ರಿಷಬ್ ಅವರ ಧ್ವನಿಯನ್ನು ಕೇಳಬಹುದಾಗಿದೆ.

ಈ ಬಗ್ಗೆ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕೂಡ ತನ್ನ ಯೂಟ್ಯೂಬ್ ಚಾನೆಲ್​ನಲ್ಲಿ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ಸಿನಿಮಾ ಚಿತ್ರೀಕರಣ ಮುಕ್ತಾಯಗೊಂಡಿದೆ ಎಂದು ಅಧಿಕೃತವಾಗಿ ಮಾಹಿತಿ ನೀಡಿದೆ. ಬರೋಬ್ಬರಿ 250 ದಿನಗಳ ಕಾಲ ಈ ಸಿನಿಮಾದ ಶೂಟಿಂಗ್ ನಡೆದಿದ್ದು, ಅಕ್ಟೋಬರ್ 2ರಂದು ಸಿನಿಮಾ ಬಿಡುಗಡೆಯಾಗಲಿದೆ.

(ಏಜೆನ್ಸೀಸ್)

ಹೊಂಬಾಳೆ ಫಿಲ್ಮ್ಸ್‌ನ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ‘ಕಾಂತಾರ ಚಾಪ್ಟರ್ 1 ಸಿನಿಮಾ ಕೂಡ ಒಂದಾಗಿದೆ.ಈ ಚಿತ್ರಕ್ಕೆ ಬಿ. ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಅರವಿಂದ್ ಕಶ್ಯಪ್ ಛಾಯಾಗ್ರಾಹಣ, ವಿನೇಶ್ ಬಂಗ್ಲನ್ ಪ್ರೊಡಕ್ಷನ್ ಡಿಸೈನ್ ಚಿತ್ರಕ್ಕೆ ಇದೆ. ಈ ಸಿನಿಮಾ ಕನ್ನಡ, ತೆಲುಗು, ಹಿಂದಿ, ಮಲಯಾಳಂ, ತಮಿಳು, ಬೆಂಗಾಲಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಾಣಲಿದೆ.

ನನ್ನ ಕನಸು, ನಮ್ಮ ಮಣ್ಣಿನ ಕಥೆಯನ್ನು ಇಡೀ ಪ್ರಪಂಚಕ್ಕೆ ಹೇಳಬೇಕು. ನಮ್ಮ ಊರು, ನಮ್ಮ ಜನ, ನಮ್ಮ ನಂಬಿಕೆಗಳು. ನಾನು ಆ ಕನಸಿನ ಬೆನ್ನಟ್ಟಲು ಶುರು ಮಾಡಿದಾಗ, ಸಾವಿರಾರು ಜನ ನನ್ನ ಬೆನ್ನಿಗೆ ನಿಂತರು. ಮೂರು ವರ್ಷಗಳ ಪರಿಶ್ರಮದಿಂದ 250 ದಿನಗಳವರೆಗೆ ಚಿತ್ರೀಕರಣ ಮಾಡಲಾಗಿದೆ. ಎಷ್ಟೇ ಕಷ್ಟಬಂದ್ರೂ ನಾನು ನಂಬಿದ ದೈವ ನನ್ನ ಕೈ ಬಿಡಲಿಲ್ಲ. ಕಾಂತಾರ'ದ ಪ್ರಪಂಚಕ್ಕೆ ಎಲ್ಲರಿಗೂ ಸ್ವಾಗತ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net