More

    ತೆಲುಗಿಗೆ ಹೊರಟ ರಿಷಬ್; ಮಿಷನ್ ಇಂಪಾಸಿಬಲ್​ನಲ್ಲಿ ಶೆಟ್ರು..

    ಬೆಂಗಳೂರು: ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕನಾಗಿ, ನಿರ್ಮಾಪಕನಾಗಿ ಮತ್ತು ನಟನಾಗಿ ಯಶಸ್ಸು ಕಂಡಿರುವ ರಿಷಬ್ ಶೆಟ್ಟಿ, ಇದೀಗ ಪಕ್ಕದ ತೆಲುಗು ಸಿನಿಮಾ ಇಂಡಸ್ಟ್ರಿಗೆ ಪದಾರ್ಪಣೆ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ತೆಲುಗಿನ ಆಹಾ ಓಟಿಟಿ ವೇದಿಕೆಯಲ್ಲಿ ‘ಬೆಲ್​ಬಾಟಂ’ ಸಿನಿಮಾ ಡಬ್ ಆಗಿ ಬಿಡುಗಡೆಯಾಗಿತ್ತು. ತೆಲುಗು ಮಂದಿಯ ಮೆಚ್ಚುಗೆಗೂ ಪಾತ್ರವಾಗಿತ್ತು. ಇದೀಗ ‘ಮಿಷನ್ ಇಂಪಾಸಿಬಲ್’ ಚಿತ್ರದ ಮೂಲಕ ಟಾಲಿವುಡ್​ನತ್ತ ಮುಖ ಮಾಡಿದ್ದಾರೆ.

    ಹಾಗಂತ, ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ರಿಷಬ್ ಪ್ರಧಾನ ಪಾತ್ರದಲ್ಲೇನೂ ಕಾಣಿಸಿಕೊಳ್ಳುತ್ತಿಲ್ಲ. ಬದಲಿಗೆ ಅಷ್ಟೇ ಪ್ರಾಮುಖ್ಯತೆ ಇರುವ ಅತಿಥಿ ಪಾತ್ರವೊಂದಕ್ಕೆ ಅವರು ಬಣ್ಣ ಹಚ್ಚಲಿದ್ದಾರೆ. ಈಗಾಗಲೇ ಈ ಸಿನಿಮಾದ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಇನ್ನೇನು ಶುರುವಾಗಲಿರುವ ಎರಡನೇ ಹಂತದ ಶೂಟಿಂಗ್​ನಲ್ಲಿ ರಿಷಬ್ ಭಾಗವಹಿಸಲಿದ್ದಾರೆ. ಸ್ವರೂಪ್ ಆರ್​ಜೆಎಸ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ಸಿನಿಮಾದಲ್ಲಿ ಸುಹಾಸ್ ಮತ್ತು ಸಂದೀಪ್ ರಾಜ್ ಮುಖ್ಯ ಪಾತ್ರದಲ್ಲಿದ್ದಾರೆ. ಇನ್ನುಳಿದಂತೆ ಕನ್ನಡದಲ್ಲಿ ರಿಷಬ್ ಅವರ ‘ಹೀರೋ’ ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ‘ಬೆಲ್​ಬಾಟಂ 2’ ಚಿತ್ರದ ಮುಹೂರ್ತ ಇತ್ತೀಚೆಗಷ್ಟೇ ನೆರವೇರಿದೆ. ಇವೆಲ್ಲದರ ಜತೆಗೆ ಇನ್ನೂ ಹಲವು ಸಿನಿಮಾಗಳಲ್ಲಿ ರಿಷಬ್ ಬಿಜಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts