

ಬೆಂಗಳೂರು: ( Rishab Shetty ) ಕಾಂತಾರ-ಚಾಪ್ಟರ್ 1 ಚಿತ್ರ (Kantara Chapter 1 ) ಬಿಡುಗಡೆಯಾಗಿದ್ದು, ನಿರೀಕ್ಷೆಯಂತೆ ಭರ್ಜರಿ ಪ್ರತಿಕ್ರಿಯೆ ಸಿಗುತ್ತಿದೆ. ಕರ್ನಾಟಕ, ದೇಶ-ವಿದೇಶದಾದ್ಯಂತ ಹೌಸ್ಫುಲ್ ಪ್ರದರ್ಶನ ಕಾಣುತ್ತಿರುವ ಈ ಸಂದರ್ಭದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ಟ್ವೀಟ್ ಮಾಡುವ ಮೂಲಕವಾಗಿ ಪ್ರೇಕ್ಷಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
2022ರ ಅಕ್ಟೋಬರ್ ತಿಂಗಳಲ್ಲಿ ಕಾಂತಾರ ಚಿತ್ರ ಬಿಡುಗಡೆಯಾಗಿದ್ದಾಗ ಬಹುತೇಕರು ಮೆಚ್ಚಿಕೊಂಡು ಗಲ್ಲಾಪೆಟ್ಟಿಗೆಯಲ್ಲಿ ಸಾವಿರಾರು ಕೋಟಿ ರೂಪಾಯಿ ಬಾಚಿಕೊಂಡಿತ್ತು. ಕಾಂತಾರ ಚಾಪ್ಟರ್ 1 ಕೂಡ ಭಾರತೀಯ ಚಿತ್ರರಂಗದಲ್ಲಿ ಹೊಸ ಹಿಸ್ಟರಿ ಬರೆಯುತ್ತಿದೆ.
ರಿಷಬ್ ಶೆಟ್ಟಿ ಎಕ್ಸ್ನಲ್ಲಿ, ‘2016 ರಲ್ಲಿ ಒಂದು ಪ್ರದರ್ಶನಕ್ಕಾಗಿ ಒದ್ದಾಡಿದ ದಿನದಿಂದ, 5000ಕ್ಕೂ ಹೆಚ್ಚು housefull ಶೋಗಳ ಈ ಅದ್ಭುತ ಪಯಣ. ಇದು ಸಾಧ್ಯವಾಗಿದ್ದು ನಿಮ್ಮ ಪ್ರೀತಿ ಮತ್ತು ಬೆಂಬಲದಿಂದ ಮಾತ್ರ. ಇದಕ್ಕಾಗಿ ನಾನು ನಿಮಗೆ ಸದಾ ಋಣಿ’ ಎಂದು ಕೃತಜ್ಞತೆಯನ್ನು ತಿಳಿಸಿದ್ದಾರೆ.
'ಕಾಂತಾರ: ಚಾಪ್ಟರ್ 1' ಸಿನಿಮಾ ಇಂದು ಅಕ್ಟೋಬರ್ 2ರಂದು ವಿಶ್ವಾದ್ಯಂತ ಬಿಡುಗಡೆಯಾಗಿದೆ. ಯಶಸ್ವಿ ಪ್ರೀಮಿಯರ್ ಶೋಗಳಿಂದ ಚಿತ್ರಕ್ಕೆ ಕೋಟಿ ಕೋಟಿ ಹರಿದು ಬಂದಿದೆ.
ಸಿನಿಮಾಗೆ ರಿಷಬ್ ಶೆಟ್ಟಿ ನಾಯಕ. ನಿರ್ದೇಶನ ಕೂಡ ಅವರದ್ದೇ. ನಾಯಕಿ ಕನಕವತಿ ಪಾತ್ರದಲ್ಲಿ ರುಕ್ಮಿಣಿ ವಸಂತ್, ಇತರ ಪ್ರಮುಖ ಪಾತ್ರವರ್ಗದಲ್ಲಿ ಜಯರಾಂ, ಕುಲ್ಶನ್ ದೇವಯ್ಯ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.