More

    ತಕ್ಷಣದ ಫಲಿತಾಂಶದ ಹಿಂದೆ ಬಿದ್ದರೆ ಅಪಾಯ

    ಶಿವಮೊಗ್ಗ: ಅತಿ ಕಡಿಮೆ ಸಮಯದಲ್ಲಿ ದೇಹದ ಶಕ್ತಿ , ಸಾಮರ್ಥ್ಯ ಹಾಗೂ ಸೌಂದರ್ಯ ಹೆಚ್ಚಿಸಿಕೊಳ್ಳಲು ಹಾನಿಕಾರಕ ವಸ್ತುಗಳ ಬಳಕೆ ಮಾಡಬೇಡಿ. ದೈಹಿಕ ಸಾಮರ್ಥ್ಯ ಕಾಪಾಡಿಕೊಳ್ಳಲು ನಿರಂತರ ಶ್ರಮ ವಹಿಸಿ ವ್ಯಾಯಾಮಗಳನ್ನು ಅಭ್ಯಾಸ ಮಾಡಬೇಕೆಂದು ಕುವೆಂಪು ವಿವಿ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ ತಿಳಿಸಿದರು.

    ಡಿವಿಎಸ್ ಕಾಲೇಜಿನಲ್ಲಿ ಮಂಗಳವಾರ ಏರ್ಪಡಿಸಿದ್ದ ಅಂತರ ಕಾಲೇಜು ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದ ಅವರು, ಇತ್ತೀಚೆಗೆ ದೇಹದಾರ್ಢ್ಯ ಪಟುಗಳು ದೇಹಕ್ಕೆ ಹಾನಿ ಉಂಟು ಮಾಡುವ ಪೌಡರ್‌ಗಳ ಬಳಕೆ ಮಾಡುತ್ತಿದ್ದಾರೆ. ಹಾನಿಕಾರಕ ವಸ್ತುಗಳ ಬಳಕೆಯಿಂದ ಕಡಿಮೆ ಸಮಯದಲ್ಲಿ ನಮಗೆ ಬೇಕಾದ ಫಲಿತಾಂಶ ಪಡೆಯಬಹುದು. ಆದರೆ ಅವು ಜೀವನ ಪೂರ್ತಿ ಕಾಯಿಲೆಗಳನ್ನೂ ನೀಡುತ್ತವೆ ಎಂದು ಎಚ್ಚರಿಸಿದರು.
    ಡಿವಿಎಸ್ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಶಿಸ್ತಿನ ಜೀವನ ಶೈಲಿ ರೂಪಿಸಿಕೊಳ್ಳಲು ಕ್ರೀಡೆ ಸಹಕಾರಿ. ಯುವಜನರು ಕ್ರೀಡಾ ಚಟುವಟಿಕೆ ಹಾಗೂ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತಿ ವಹಿಸಬೇಕು. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಪ್ರಾಚಾರ್ಯ ಡಾ. ಎಂ.ವೆಂಕಟೇಶ್ ಮಾತನಾಡಿ, ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ದೃಷ್ಟಿಯಿಂದ ಇಂತಹ ಸ್ಪರ್ಧೆ ಸಹಕಾರಿಯಾಗಿದೆ. ಪ್ರತಿಯೊಬ್ಬರೂ ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಒತ್ತು ನೀಡಬೇಕೆಂದರು.
    ಡಿವಿಎಸ್ ಸಹ ಕಾರ್ಯದರ್ಶಿ ಡಾ. ಎ.ಸತೀಶ್‌ಕುಮಾರ್ ಶೆಟ್ಟಿ ಮಾತನಾಡಿ, ಯುವಜನರು ಸಮಾಜದ ಆಸ್ತಿ. ದೇಹವನ್ನು ಸದೃಢವಾಗಿರಿಸಿಕೊಂಡರೆ ಮನಸ್ಸೂ ಚೆನ್ನಾಗಿರುತ್ತದೆ. ದೈಹಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವ ಕೇಂದ್ರಗಳು ಹೆಚ್ಚಾಗಬೇಕು. ಯುವ ವಿದ್ಯಾರ್ಥಿಗಳಲ್ಲಿ ಆರೋಗ್ಯ ಜಾಗೃತಿ ಮುಖ್ಯ ಎಂದು ಹೇಳಿದರು.
    ಖಜಾಂಚಿ ಬಿ.ಗೋಪಿನಾಥ್, ಐಕ್ಯೂಎಸಿ ಸಂಚಾಲಕ ಎನ್.ಕುಮಾರಸ್ವಾಮಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಕೆ.ಸಚಿನ್ ಮುಂತಾದವರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts