More

    ಶಿವಕುಮಾರ ಶ್ರೀಗಳ 5ನೇ ಪುಣ್ಯಸ್ಮರಣೆ; ಸಿದ್ಧಗಂಗಾ ಮಠದಲ್ಲಿ ಪೂಜಾ ಕೈಂಕರ್ಯಗಳು

    ತುಮಕೂರು: ಕರ್ನಾಟಕ ರತ್ನ, ತ್ರಿವಿಧ ದಾಸೋಹಿ, ನಡೆದಾಡುವ ದೇವರು ಎಂದೇ ಖ್ಯಾತಿ ಪಡೆದಿರುವ ಶ್ರೀ ಶಿವಕುಮಾರ ಸ್ವಾಮೀಜಿಯ 5ನೇ ಪುಣ್ಯ ಸ್ಮರಣೆ ಪ್ರಯುಕ್ತ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

    ಸಿದ್ಧಲಿಂಗ ಸ್ವಾಮೀಜಿಯ ನೇತೃತ್ವದಲ್ಲಿ ರುದ್ರಾಭಿಷೇಕ, ಶಿವಕುಮಾರ ಸ್ವಾಮೀಜಿಯ ಗದ್ದುಗೆ ಪೂಜೆ, ಬಸವೇಶ್ವರ ಬಡಾವಣೆಯವರೆಗೆ ಶಿವಕುಮಾರ ಸ್ವಾಮೀಜಿಯ ವಿಗ್ರಹದ ಮೆರವಣಿಗೆ ನಡೆಯಿತು. ವಿವಿಧ ಮಠಗಳ ಸ್ವಾಮೀಜಿಗಳು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

    gadduge

    ಇದನ್ನೂ ಓದಿ: ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗೆ ದಿನಗಣನೆ; ಯಜಮಾನರಾಗಿ ಕರ್ನಾಟಕದ ದಂಪತಿಗೆ ಅವಕಾಶ

    ಪುಣ್ಯಸ್ಮರಣೆ ಪ್ರಯುಕ್ತ ಮಠಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದು, ಯಾವುದೇ ತೊಂದರೆಯಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಲಿದ್ದು, ಶಿವಕುಮಾರ ಸ್ವಾಮೀಜಿಯ ಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಮಠದ ಆವರಣದಲ್ಲಿ ಅರಣ್ಯ ಇಲಾಖೆಯಿಂದ ನಿರ್ಮಿಸಿರುವ ‘ಸ್ಮೃತಿ ವನ’ ಉದ್ಘಾಟಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts