ಬೆಳಗಾವಿ: ಉತ್ತರ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಬೆಂಗಳೂರು -ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಯ ವರೆಗೆ ವಿಸ್ತರಿಸಲು ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ್ ಶೆಟ್ಟರ್ ಪತ್ರದ ಮೂಲಕ ಮನವಿ ಮಾಡಿದ್ದಾರೆ.ಪುಣೆ-ಬೆಳಗಾವಿ-ಹುಬ್ಬಳ್ಳಿ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಪ್ರಾರಂಭಿಸಬೇಕು ಎಂಬ ನಮ್ಮ ಮನವಿಗೆ ಸ್ಪಂದಿಸಿ, ನಮ್ಮ ಬೆಳಗಾವಿ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ನಾಳೆ ಸೆಪ್ಟೆಂಬರ್ 16ರಂದು ಪುಣೆ-ಬೆಳಗಾವಿ-ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ಶ್ರೀ ನರೇಂದ್ರ ಮೋದಿಯವರಿಂದ ಚಾಲನೆ ದೊರೆಯಲಿರುವುದು ಅತ್ಯಂತ ಸಂತಸದ ಸಂಗತಿ. ಇದಕ್ಕಾಗಿ ನಿಮಗೆ ತುಂಬು ಹೃದಯದ ಧನ್ಯವಾದಗಳು.
ಇದೀಗ ನಮ್ಮ ಕ್ಷೇತ್ರದ ಜನರ ಮತ್ತೊಂದು ಮಹತ್ವದ ಬೇಡಿಕೆಯಾದ ಬೆಂಗಳೂರು -ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಬೆಳಗಾವಿಯ ವರೆಗೆ ವಿಸ್ತರಿಸಲು ತಮ್ಮಲ್ಲಿ ವಿನಂಬ್ರ ಮನವಿ. ಈ ಹಿಂದೆ ಈ ರೈಲನ್ನು ಬೆಳಗಾವಿಯ ವರೆಗೆ ಟ್ರಯಲ್ ರನ್ ಮಾಡಿದಾಗ ಅದು ಯಶಸ್ವಿಯಾಗಿತ್ತು. ತಾಂತ್ರಿಕ ಕಾರಣಗಳನ್ನು ನೀಡಿದ ರೈಲ್ವೆ ಅಧಿಕಾರಿಗಳು ಹೊಸ ವೇಳಾಪಟ್ಟಿಯನ್ನು ಆರಂಭಿಸುವ ಪ್ರಕ್ರಿಯೆಯನ್ನು ನಿಲ್ಲಿಸಿದ್ದಾರೆ. ಈ ಎಲ್ಲ ಮಾಹಿತಿಗಳನ್ನು ನಾನು ಈಗಾಗಲೇ ನಿಮ್ಮೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದ ಸಂದರ್ಭದಲ್ಲಿ ತಿಳಿಸಿದ್ದೇನೆ.
ಕ್ಷೇತ್ರದ ಜನರ ಬೆಡಿಕೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು-ಹುಬ್ಬಳ್ಳಿ-ಧಾರವಾಡ ವಂದೇ ಭಾರತ್ ಸೇವೆಗಳನ್ನು ಬೆಳಗಾವಿ (ಕರ್ನಾಟಕ) ವರೆಗೆ ವಿಸ್ತರಿಸಲು ತಾವು ಮನವಿಯನ್ನು ಪರಿಶೀಲಿಸುವಂತೆ ನಾನು ಮತ್ತೊಮ್ಮೆ ವಿನಂತಿಸುತ್ತೇನೆ. ಎಂದು ಪತ್ರದ ಮೂಲಕ ಮನವಿ ಮಾಡಿದ್ದಾರೆ.