More

    ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ; ಬಿಜೆಪಿ ಜೊತೆ ಕೈ ಜೋಡಿಸಿದ ಆರ್​ಎಲ್​ಡಿ

    ಲಖನೌ: ಮಹತ್ತರ ಬೆಳವಣಿಗೆ ಒಂದರಲ್ಲಿ ವಿಪಕ್ಷಗಳ ಮೈತ್ರಿಕೂಟ ಇಂಡಿಯಾವನ್ನು ತೊರೆದು ಎನ್​ಡಿಎ ಸೇರುವುದಾಗಿ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಹಾಗೂ ಉತ್ತರಪ್ರದೇಶದ ಪ್ರಭಾವಿ ಜಾಟ್​ ನಾಯಕ ಜಯಂತ್​ ಚೌಧರಿ ಘೋಷಿಸಿದ್ದಾರೆ.

    ಮಾಜಿ ಪ್ರಧಾನಿ ಚೌಧರಿ ಚರಣ್​ ಸಿಂಗ್​ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ನಡೆದಿದ್ದು, ಇಂಡಿಯಾ ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಹೇಳಬಹುದಾಗಿದೆ.

    ಇದನ್ನೂ ಓದಿ: ಮಾಂಸಹಾರ ಸೇವಿಸಿ ಸುತ್ತೂರು ಮಠಕ್ಕೆ ಭೇಟಿ; ಸಿಎಂ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ

    ಈ ಕುರಿತು ಮಾತನಾಡಿರುವ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್​ ಚೌಧರಿ, ನನ್ನ ಪಾಲಿಗೆ ಇದು ಭಾವನಾತ್ಮಕ ಕ್ಷಣವಾಗಿದ್ದು, ರಾಷ್ಟ್ರಪತಿ, ಭಾರತ ಸರ್ಕಾರ ಮತ್ತು ವಿಶೇಷವಾಗಿ ಪ್ರಧಾನಿ ಮೋದಿಯವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ. ಏಕೆಂದರೆ ಈ ನಿರ್ಧಾರವು ಅವರ ದೂರದೃಷ್ಟಿಯ ಒಂದು ಭಾಗವಾಗಿದೆ. ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡಿರುವುದು ದೇಶದಾದ್ಯಂತ ದೊಡ್ಡ ಸಂದೇಶವನ್ನು ರವಾನಿಸಿದೆ ಎಂದು ಹೇಳಿದ್ದಾರೆ.

    ನಮ್ಮ ತಾತನವರಿಗೆ (ಚೌಧರಿ ಚರಣ್​ ಸಿಂಗ್) ಭಾರತ ರತ್ನ ಘೋಷಿಸುವ ಮೂಲಕ ಬಿಜೆಪಿ ನಮ್ಮ ಮನ ಗೆದ್ದಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಕೈ ಜೋಡಿಸಲು ನಾವು ಸಿದ್ದರಿದ್ದು, ಬೇಡ ಎಂದು ಹೇಳಲು ಸಾಧ್ಯವಿಲ್ಲ. ಅದರಂತೆ ಉತ್ತರಪ್ರದೇಶದಲ್ಲಿ 2 ಲೋಕಸಭೆ ಹಾಗೂ ಒಂದು ರಾಜ್ಯಸಭೆ ಸ್ಥಾನವನ್ನು ನೀಡಲು ಬಿಜೆಪಿ ನಾಯಕರು ಸಿದ್ದರಿದ್ದು, ಮತ್ತೊಂದು ಸುತ್ತಿನ ಮಾತುಕತೆ ನಡೆದ ಬಳಿಕ ಘೋಷಣೆ ಮಾಡಲಾಗುವುದು ಎಂದು ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಜಯಂತ್​ ಚೌಧರಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts