More

    ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಹೊಟ್ಟೆ ಉರಿ: ರಾಮಲಿಂಗಾರೆಡ್ಡಿ

    ಸಿಂಧನೂರು: ಕಾಂಗ್ರೆಸ್​ ಪಕ್ಷದ ತತ್ವ ಸಿದ್ದಾಂತವನ್ನು ಒಪ್ಪಿ ಸ್ವಯಂಪ್ರೇರಿತರಾಗಿ ಬರುವವರನ್ನು ನಾವು ಸ್ವಾಗತಿಸುತ್ತೇವೆ. ಆಪರೇಷನ್​ ಹಸ್ತ ಕೇವಲ ವದಂತಿಯಷ್ಟೇ ಅದರ ಅವಶ್ಯಕತೆ ಕಾಂಗ್ರೆಸ್​ಗಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

    ಕಾಂಗ್ರೆಸ್​ ಪಕ್ಷ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಹೊಟ್ಟೆ ಉರಿ ಬಂದಿದೆ. ಒಂದು ವೇಳೆ ಬಿಜೆಪಿಯವರು ಒಳ್ಳೆಯ ಆಡಳಿತ ಕೊಟ್ಟಿದ್ದರೆ ಜನರು ಅವರನ್ನು ವಿರೋಧ ಪಕ್ಷದಲ್ಲಿ ಯಾಕೆ ಕೂರಿಸುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

    ಕಾಂಗ್ರೆಸ್​ ಪಕ್ಷ ಚುನಾವಣೆ ಪೂರ್ವದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ನಾಲ್ಕ ಯೋಜನೆಗಳನ್ನು ಈಗಾಗಲೇ ಈಡೇರಿಸಿದೆ. ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಕ್ಕಿ ಕೊಡದ ಕಾರಣ ಜನರ ಖಾತೆಗಳಿಗೆ ದುಡ್ಡನ್ನು ಹಾಕುತ್ತಿದ್ದೇವೆ. ಶಕ್ತಿ ಯೋಜನೆಯಡಿ ಮಹಿಳೆಯರು ರಾಜ್ಯಾದ್ಯಂತ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಗೃಹಜ್ಯೋತಿ ಯೋಜನೆ ಅಡಿ ಉಚಿತ ವಿದ್ಯುತ್​ ಕೊಡುತ್ತಿದ್ದೇವೆ. ಆಗಸ್ಟ್​ 30ರಂದು ಮೈಸೂರಿನಲ್ಲಿ ರಾಹುಲ್​ ಗಾಂಧಿ ಅವರು ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕೊಡಲಿದ್ದಾರೆ.

    ಇದನ್ನೂ ಓದಿ: ತ್ರಿವರ್ಣ ಧ್ವಜದ ಮೇಲೆ ಸಹಿ ಹಾಕಲು ಸಾಧ್ಯವಿಲ್ಲ; ಚಿನ್ನದ ಹುಡುಗನ ದೇಶಪ್ರೇಮಕ್ಕೆ ಮನಸೋತ ಜನ

    ವಿರೋಧ ಪಕ್ಷದಲ್ಲಿದ್ಧೇವೆ ಎಂಬ ಕಾರಣಕ್ಕೆ ಮಾಜಿ ಸಿಎಂ ಬಸವರಾಜ್​ ಬೊಮ್ಮಾಯಿ ಅವರು ಸುಮ್ಮನೆ ಮಾತನಾಡುತ್ತಿದ್ದಾರೆ. ಬಿಜೆಪಿ ನಾಯಕರಿಗೆ ಕಾಂಗ್ರೆಸ್​ ಪಕ್ಷದ ಗ್ಯಾರಂಟಿ ಯೋಜನೆಗಳಿಂದ ಹೊಟ್ಟೆ ಉರಿ ಬಂದಿದೆ. ಬಿಜೆಪಿಯವರು ತಮ್ಮ ಅಧಿಕಾರವಧಿಯಲ್ಲಿ ಸರಿಯಾಗಿ ಆಡಳಿತ ನಡೆಸಿದ್ದರೆ ಜನರು ಅವರನ್ನು ಯಾಕೆ ವಿರೋಧ ಪಕ್ಷದಲ್ಲಿ ಕೂರಿಸುತ್ತಿದ್ದರು. ಒಳ್ಳೆಯ ಆಡಳಿತ ಕೊಡದ ಕಾರಣ ಅವರಿಗೆ ಇಂದು ಈ ದುಸ್ಥಿತಿ ಬಂದಿದೆ.

    ಚುನಾವಣೆ ಮುಗಿದು ನಾಲ್ಕು ತಿಂಗಳು ಕಳೆಯುತ್ತಾ ಬಂದರು ಬಿಜೆಪಿ ಹೈ ಕಮಾಂಡ್​ ಇನ್ನು ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷನ ಸ್ಥಾನಕ್ಕೆ ಮುಖಂಡರನ್ನು ನೇಮಕ ಮಾಡಲು ಅವರ ರಾಷ್ಟ್ರೀಯ ನಾಯಕರು ಹಿಂದೇಟು ಹಾಕುತ್ತಿದ್ದಾರೆ ಎಂದು ಸಚಿವ ರಾಮಲಿಂಗಾರೆಡ್ಡಿ ಟೀಕಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts