More

    ಇದೊಂದು ಕಾರಣಕ್ಕೆ ಯಾವುದೇ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬಂದಿಲ್ಲ! ಮತದಾನದ ಬಳಿಕ ಯಶ್ ಹೇಳಿದ್ದಿಷ್ಟು…

    ಬೆಂಗಳೂರು: ನಟ ರಾಕಿಂಗ್ ಸ್ಟಾರ್ ಯಶ್ ಹೊಸಕೆರೆಹಳ್ಳಿಯ ಮತಗಟ್ಟೆ ಕೇಂದ್ರ 171ರಲ್ಲಿ ಮತದಾನ ಮಾಡಿದ್ದಾರೆ. ಯಶ್ ಮತ ಚಲಾವಣೆಗೆ ಬರುತ್ತಾರೆ, ಅವರನ್ನು ನೋಡಬೇಕೆಂದು ಮತಗಟ್ಟೆಯ ಬಳಿ ಬೆಳಗ್ಗಿನಿಂದಲೇ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಸೇರಿದ್ದರು. ಮತ ಕೇಂದ್ರದ ಬಳಿ ಯಶ್ ಬರುತ್ತಿದ್ದಂತೆ ಅಭಿಮಾನಿಗಳು ಮತ್ತಿಗೆ ಹಾಕಿದ್ದು, ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುತ್ತಿಗೆ ಹಾಕಿದ್ದಾರೆ.

    ಇದೇ ಕಾರಣಕ್ಕೆ ಪ್ರಚಾರಕ್ಕೆ ಬಂದಿಲ್ಲ!

    ಹಕ್ಕು ಚಲಾವಣೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ಪ್ರತಿಯೊಬ್ಬರ ಹಕ್ಕು. ಅದನ್ನು ಚಲಾಯಿಸುವುದು ಮುಖ್ಯವಾಗುತ್ತದೆ. ಆಸಕ್ತಿ ಇಲ್ಲದ ಕಾರಣಕ್ಕೆ ಯಾವುದೇ ಅಭ್ಯರ್ಥಿಯ ಪರ ಪ್ರಚಾರಕ್ಕೆ ಬಂದಿಲ್ಲ. ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಯಶೋಮಾರ್ಗ ಫೌಂಡೇಶನ್​ ಮೂಲಕ ಕೆಲ ಸಮಾಜಮುಖಿ ಕೆಲಸ ಮಾಡಿದ್ದೆವು. ಹೀಗಾಗಿ ಪ್ರಚಾರದಲ್ಲಿ ಪಾಲ್ಗೊಂಡಿದ್ದೆ. ರಾಜಕಾರಣಿಗಳು ಹಾಗೂ ಪಕ್ಷಗಳು ಮೂಲಭೂತ ಕೆಲಸಗಳನ್ನು ಸರಿಯಾಗಿ ಮಾಡಬೇಕು. ಆಗ ಜನರಿಗೂ ಸಹಾಯವಾಗುತ್ತದೆ ಎಂದು ಯಶ್ ಹೇಳಿದರು.

    ಇದನ್ನೂ ಓದಿ: ಮತ ಚಲಾಯಿಸಲು ಬಂದ ಮಹಿಳೆಗೆ ಲಾಠಿ ಏಟು; ಪೊಲೀಸರಿಗೆ ಗ್ರಾಮಸ್ಥರಿಂದ ತರಾಟೆ

    ಹುಟ್ಟೂರಿನಲ್ಲಿ ಮತ ಚಲಾಯಿಸಿದ ರಿಷಬ್ ಶೆಟ್ಟಿ

    ಉಡುಪಿ: ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ಈ ಬಗ್ಗೆ ಟ್ವಿಟರ್​ನಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಈ ವೇಳೆ ನೆಚ್ಚಿನ ನಟನೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಅಭಿಮಾನಿಗಳು ಮುಂದಾಗಿದ್ದಾರೆ.

    ಮತದಾನ ಮಾಡಿದ ರಕ್ಷಿತ್ ಶೆಟ್ಟಿ

    ಉಡುಪಿ: ನಟ ರಕ್ಷಿತ್ ಶೆಟ್ಟಿ ಬೆಂಗಳೂರಿನಿಂದ ಬಂದು ಉಡುಪಿ ಜಿಲ್ಲೆಯಲ್ಲಿ ಮತದಾನ ಮಾಡಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ನನಗೆ ಪಕ್ಷದ ಮೇಲೆ ಒಲವಿದೆ. ಆದರೆ ಪ್ರಚಾರಕ್ಕೆ ಹೋಗುವುದಿಲ್ಲ. ಜನರಿಗಾಗಿ ಕೆಲಸ ಮಾಡುವ ನಾಯಕರನ್ನು ಆಯ್ಕೆ ಮಾಡಬೇಕು ಎಂದು ಹೇಳಿದರು.

    ಇದನ್ನೂ ಓದಿ: ವಿಜಯಪುರ | ಮುಂಜಾಗ್ರತೆಗಾಗಿ ತರಲಾಗುತ್ತಿದ್ದ ಮಂತಯಂತ್ರಗಳನ್ನು ಒಡೆದು ಹಾಕಿದ ಗ್ರಾಮಸ್ಥರು; ಅಧಿಕಾರಿಗಳಿಗೆ ಥಳಿತ, ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ

    ಮತದಾನ ಮಾಡಿದ ಪ್ರೇಮ್-ರಕ್ಷಿತಾ

    ಬೆಂಗಳೂರು: ನಟ, ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ದಂಪತಿ ಒಟ್ಟಾಗಿ ಬಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಮತಗಟ್ಟೆಯಲ್ಲಿದ ಜನರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ. ಬಳಿಕ ಮಾತನಾಡಿದ ನಿರ್ದೇಶಕ ಪ್ರೇಮ್, ದುಡ್ಡು ಪಡೆದುಕೊಂಡು ಯಾರೂ ಮತ ಹಾಕಬೇಡಿ. ಒಬ್ಬೊಬ್ಬರು ಮನೆ ಹತ್ತಿರ ವೋಟ್ ಹಾಕಿ ಎಂದು ಬರುತ್ತಾರೆ. ಇನ್ನು ಕೆಲವರು ಬಂದು ಇದು ನನ್ನ ಕೊನೆಯ ಚುನಾವಣೆ. ಹೀಗಾಗಿ ಮತ ಹಾಕಿ ಎನ್ನುತ್ತಾರೆ. ಆದರೆ ಯಾವುದೇ ಕಾರಣಕ್ಕೂ ನಿಮ್ಮ ಹಕ್ಕನ್ನು ಮಾರಿಕೊಳ್ಳಬೇಡಿ. ಒಳ್ಳೆಯ ವ್ಯಕ್ತಿ, ಕೆಲಸ ಮಾಡುವ ಅಭ್ಯರ್ಥಿಗೆ ಮತ ನೀಡಿ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts