ಲಕ್ನೋ: ಟ್ರ್ಯಾಕ್ಟರ್-ಟ್ರಕ್ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಸಂಭವಿಸಿದ ಪರಿಣಾಮ ಟ್ರ್ಯಾಕ್ಟರ್‌ನಲ್ಲಿದ್ದ ಹತ್ತು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: Bomb Threat: ಬೆಂಗಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ! ಪೊಲೀಸರಿಂದ ತಾಪಸಣೆ
ಉತ್ತರ ಪ್ರದೇಶದ ಭದೋಹಿಯಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಿಂಬದಿಯಿಂದ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿದ್ದು, ಮೂವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಭದೋಹಿಯ ಮಹರಾಜಗಂಜ್ ಮತ್ತು ಮಿರ್ಜಾಪುರದ ಕಟ್ಕಾ ಗಡಿಯ ಬಳಿ ಈ ಅಪಘಾತ ಸಂಭವಿಸಿದ್ದು, ಮೂಲಗಳ ಪ್ರಕಾರ 13 ಕಾರ್ಮಿಕರಿದ್ದ ದೈನಂದಿನ ಕೂಲಿ ಕೆಲಸ ಮುಗಿಸಿ ಮನೆಗೆ ಮನೆಗೆ ಮರಳುತ್ತಿದ್ದರು. ಅಷ್ಟರಲ್ಲಿ ಹಿಂದಿನಿಂದ ಟ್ರಕ್ ವೇಗವಾಗಿ ಬಂದಿದೆ. ನಂತರ ನಿಯಂತ್ರಣ ತಪ್ಪಿದ ಲಾರಿ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಸ್ಥಳದಲ್ಲೇ 13 ಮಂದಿಯಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಮಿರ್ಜಾಪುರದ ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ಕುಮಾರ್ ಸಿಂಗ್ ಹೇಳಿದ್ದಾರೆ.
ಈ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಪೊಲೀಸರು ಗಂಭೀರವಾಗಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಪ್ರಥಮ ಚಿಕಿತ್ಸೆ ನೀಡಿದ ಬಳಿಕ ವಾರಣಾಸಿಯ ಟ್ರಾಮಾ ಸೆಂಟರ್‌ಗೆ ದಾಖಲಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ. ಸದ್ಯ ಅವರು ವೈದ್ಯರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
13ಪೊಲೀಸರು ಮೃತರ ದೇಹಗಳನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಈ ಘಟನೆ ನಂತರ ಇಡೀ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ. ಪೊಲೀಸರು ಮೃತರ ದೇಹಗಳನ್ನು ತಮ್ಮ ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ನಂತರ ಮೃತರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ. ಈ ಸಂಬಂಧ ಪ್ರಕರಣ ದಾಜಲಾಗಿದೆ. ಈ ಘಟನೆ ನಂತರ ಇಡೀ ಪ್ರದೇಶದಲ್ಲಿ ಸ್ಮಶಾನ ಮೌನ ಆವರಿಸಿದೆ.
Bomb Threat: ಬೆಂಗಳೂರಿನ ಮೂರು ಕಾಲೇಜುಗಳಿಗೆ ಬಾಂಬ್ ಬೆದರಿಕೆ! ಪೊಲೀಸರಿಂದ ತಾಪಸಣೆ