18.1 C
Bangalore
Saturday, December 7, 2019

ನಾಲ್ಕು ಅಪಘಾತ, 12 ಸಾವು, 20 ಮಂದಿಗೆ ಗಾಯ: ಕಲಬುರಗಿ ಬಳಿ ನಿಂತಿದ್ದ ಲಾರಿಗೆ ಸ್ಕಾರ್ಪಿಯೊ ಡಿಕ್ಕಿ, ಬಾಗಲಕೋಟೆಯಲ್ಲೂ ಅವಘಡ

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಬೆಂಗಳೂರು: ರಾಜ್ಯದ ವಿವಿಧೆಡೆ ಸಂಭವಿಸಿದ ನಾಲ್ಕು ಪ್ರತ್ಯೇಕ ಅಪಘಾತಗಳಲ್ಲಿ 12 ಮಂದಿ ಮೃತಪಟ್ಟಿದ್ದು, 20 ಜನ ಗಾಯಗೊಂಡಿದ್ದಾರೆ.

ಕಲಬುರಗಿಯ ಆಳಂದ ರಸ್ತೆ ಸಾವಳಗಿ ಕ್ರಾಸ್ ಹತ್ತಿರ ಸೋಮವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಾರಾಷ್ಟ್ರ ಮೂಲದ ಇಬ್ಬರು ಮಕ್ಕಳು ಸೇರಿ ಐವರು ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ದಕ್ಷಿಣ ಸೊಲ್ಲಾಪುರ ತಾಲೂಕಿನ ಚಿಂಚಪುರದ ಸಂಜಯಕುಮಾರ ಅಶೋಕ ಚಡಚಣ(30), ರಾಣಿ ಸಂಜಯಕುಮಾರ (27), ಶ್ರೇಯಸ್ (3), ಭಾಗ್ಯಶ್ರೀ ಭೀಮಾಶಂಕರ (26) ಹಾಗೂ ಧೀರಜ್ ಸಂಗಣ್ಣ ಹತ್ತರಸಂಗ (7) ಮೃತರು. ಗಾಯಾಳು ಶಿವರಾಜ, ಶಿವಮ್ಮ ಅಲಿಯಾಸ್ ಶೀತಲ್ ಸಂಗಣ್ಣ ಹಾಗೂ ಭೀಮಾಶಂಕರ ಅವರನ್ನು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೀತಲ್ ಮತ್ತು ಸ್ನೇಹಿತರ ಕುಟುಂಬದವರು 3 ಕಾರುಗಳಲ್ಲಿ ಆ. 21ರಂದು ಪ್ರವಾಸ ಆರಂಭಿಸಿದ್ದರು. ಹೈದರಾಬಾದ್, ಶ್ರೀಶೈಲ, ತಿರುಪತಿ ಮುಂತಾದ ಸ್ಥಳಗಳನ್ನು ನೋಡಿಕೊಂಡು ಸೇಡಂ ಮಾರ್ಗವಾಗಿ ವಾಪಸ್ ಬರುವಾಗ ಒಂದು ವಾಹನ(ಸ್ಕಾರ್ಪಿಯೊ) ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಲಾರಿಗೆ ಗುದ್ದಿದ್ದರಿಂದ ಅಪಘಾತ ಸಂಭವಿಸಿದೆ.

ಬಾಗಲಕೋಟೆ ಜಿಲ್ಲೆ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿಯ ಕೊಡಬಾಗಿ ಪೆಟ್ರೋಲ್ ಬಂಕ್ ಬಳಿ ಕಾರು ಮತ್ತು 2 ಬೈಕ್ ಮಧ್ಯೆ ಮಂಗಳವಾರ ಮಧ್ಯಾಹ್ನ ಸರಣಿ ಅಪಘಾತ ಸಂಭವಿಸಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆ ರಾಮದುರ್ಗದ ಬೀಡಕಿ ಗ್ರಾಮಸ್ಥರು ಎನ್ನಲಾದ ಇವರ ಬಗ್ಗೆ ಹೆಚ್ಚಿನ ವಿವರ ಇನ್ನೂ ಲಭಿಸಿಲ್ಲ.

ಬೆಂಗಳೂರಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಸೋಮವಾರ ತಡ ರಾತ್ರಿ ಸಂಭವಿಸಿದ ಟಿಪ್ಪರ್-ಕಾರು ಅಪಘಾತದಲ್ಲಿ 2 ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಕಾನ್​ಪುರ ಮೂಲದ ಅಂಜನಿ ಯಾದವ್ (31), ನೇಹಾ (28), ಧ್ರುವ (2), ಶುಭ್ರಾ (29) ಮೃತರು. ಇವರು ಎಲೆಕ್ಟ್ರಾನಿಕ್​ಸಿಟಿಯ ಸಾಫ್ಟ್​ವೇರ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.

ದೇವನಹಳ್ಳಿ-ಬೆಂಗಳೂರು ಹೆದ್ದಾರಿಯ ಚಿಕ್ಕಸಣ್ಣೆ ಗೇಟ್ ಬಳಿ ಮಂಗಳವಾರ ಬೆಳಗ್ಗೆ ನೀರಿನ ಟ್ಯಾಂಕರ್​ಗೆ ಕೆಎಸ್​ಆರ್​ಟಿಸಿ ಬಸ್ ಡಿಕ್ಕಿಯಾಗಿ ಚಿಕ್ಕಬಳ್ಳಾಪುರದ 15 ಜನ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು.

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...