ರಸ್ತೆ ಅಪಘಾತದಲ್ಲಿ ಬಿಜೆಪಿ ಮಾಜಿ ಶಾಸಕ ಸಾವು

ಬೆಳಗಾವಿ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಚಿಕ್ಕೋಡಿ- ಸದಲಗಾ ವಿಧಾನಸಭಾ ಮತಕ್ಷೇತ್ರದ ಮಾಜಿ ಶಾಸಕ ದತ್ತು ಹಕ್ಯಾಗೋಳ (78) ಮೃತಪಟ್ಟಿದ್ದಾರೆ.

ಹುಕ್ಕೇರಿ ತಾಲೂಕಿನ ಹಿಟ್ನಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಬೈಕ್​ನಲ್ಲಿ ಹಿಂಬದಿಯಲ್ಲಿ ಕುಳಿತು ಪ್ರಯಾಣಿಸುತ್ತಿದ್ದ ದತ್ತು ಹಕ್ಯಾಗೋಳ ಅವರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜತೆಗೆ ಬೈಕ್​ ಸವಾರ ಗಾಯಗೊಂಡಿದ್ದಾರೆ.

ಗಾಯಾಳುವನ್ನು ತಕ್ಷಣ ಸಂಕೇಶ್ವರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2004ರಲ್ಲಿ ದತ್ತು ಹಕ್ಯಾಗೋಳ ಬಿಜೆಪಿಯಿಂದ ಚಿಕ್ಕೋಡಿ – ಸದಲಗಾ ಎಸ್ ಸಿ ಮೀಸಲು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.(ದಿಗ್ವಿಜಯ ನ್ಯೂಸ್)