ಬಳ್ಳಾರಿಯಲ್ಲಿ ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರ ದುರ್ಮರಣ | Road Accident

dk - 2025-05-26T145456.154
Published on

Road Accident : ಬಳ್ಳಾರಿ (ಸಂಡೂರು): ಅದಿರು ಲಾರಿ ಹಾಗೂ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತ ಘಟನೆ ತಾಲೂಕಿನ ಜೈಸಿಂಗಾಪುರ ಗ್ರಾಮದ ಬಳಿ ಸೋಮವಾರ ನಡೆದಿದೆ.

ಸಂಡೂರು ತಾಲೂಕಿನ ಲಕ್ಷ್ಮೀಪುರ ಗ್ರಾಮದ ನಿವಾಸಿಗಳಾದ ಆಶಾ(28), ಜಯಲಕ್ಷ್ಮೀ (21) ಒಬ್ಬ ಬಾಲಕ ಮತ್ತು ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದ್ದಿದ್ದಾರೆ. ಕಾರು ಸಂಡೂರು ಪಟ್ಟಣದಿಂದ ಹೊಸಪೇಟೆಗೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಹೊಸಪೇಟೆ ಕಡೆಯಿಂದ ವೇಗವಾಗಿ ಬಂದ ಆದಿರು ಲಾರಿ ಕಾರಿ ಡಿಕ್ಕಿ ಹೊಡೆದಿದೆ. ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ. ಈ ಕುರಿತು ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net