ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮೂವರ ಸಾವು, ಇಬ್ಬರ ಸ್ಥಿತಿ ಗಂಭೀರ

Car Accident
Published on

ಮಂಡ್ಯ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಡೆದಿದೆ.

ಘಟನೆಯೂ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಗೆಜ್ಜಲೆಗೆರೆ ಬಳಿ ನಡೆದಿದ್ದು, ಮಾರುತಿ ಸ್ವಿಫ್ಟ್​​ ಹಾಗೂ ಟಾಟಾ ಹೆಕ್ಸಾ​ ಕಾರುಗಳ ನಡುವೆ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಸ್ವಿಫ್ಟ್​ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.

Car Accident

ಮೃತರನ್ನು ಉತ್ತರಪ್ರದೇಶ ಮೂಲದ ನೀರಜ್​ ಕುಮಾರ್​(50), ಅವರ ಪತ್ನಿ ಸೆಲ್ವಿ(47), ಮಂಡ್ಯ ಮೂಲದ ಕಾರು ಚಾಲಕ ನಿರಂಜನ್​(35) ಎಂದು ಗುರುತಿಸಲಾಗಿದೆ. ಟಾಟಾ ಹೆಕ್ಸಾ​ ಕಾರಿನಲ್ಲಿದ್ದ ಪತಿ-ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಇಬ್ಬರನ್ನು ಮಂಡ್ಯದ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೀರಜ್​ ಕುಮಾರ್​ ಅವರ ಪತ್ನಿ ಸೆಲ್ವಿ ಜೊತೆ ಬಾಡಿಗೆ ಕಾರು ಮಾಡಿಕೊಂಡು ಮೈಸೂರಿಗೆ ತೆರಳುತ್ತಿದ್ದರು. ಎದುರು ಬದಿಯಲ್ಲಿ ಬೆಂಗಳೂರು ಕಡೆ ಬರುತ್ತಿದ್ದ ಟಾಟಾ ಹೆಕ್ಸಾ​ ಕಾರು ಸೋನೆ ಮಳೆಯಿಂದ ಜಾರಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ನಂತರ ಎದುರು ಬದಿಯಲ್ಲಿ ಬರುತ್ತಿದ್ದ ಸ್ವಿಫ್ಟ್​ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ಧಾರೆ.

ಡಿಕ್ಕಿಯ ರಭಸಕ್ಕೆ ಸ್ವಿಫ್ಟ್​ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಮದ್ದೂರು ಸಂಚಾರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net