More

    ಡಿವೈಡರ್​​ಗೆ ಡಿಕ್ಕಿಯಾಗಿ ರಸ್ತೆಯ ಇನ್ನೊಂದು ಬದಿಗೆ ಹಾರಿದ ಕಾರು; ತುಮಕೂರು ರಸ್ತೆಯಲ್ಲಿ ಸರಣಿ ಅಪಘಾತ

    ನೆಲಮಂಗಲ: ವೇಗವಾಗಿ ಬರುತ್ತಿದ್ದ ಕಾರೊಂದು ಡಿವೈಡರ್​ಗೆ ಡಿಕ್ಕಿಯಾಗಿ ರಸ್ತೆಯ ಇನ್ನೊಂದು ಬದಿಗೆ ನೆಗೆದು ಸರಣಿ ಅಪಘಾತಕ್ಕೆ ಕಾರಣವಾದ ಘಟನೆಯೊಂದು ನಡೆದಿದೆ. ತುಮಕೂರು ರಸ್ತೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.

    ತುಮಕೂರು ಕಡೆಯಿಂದ ಬರುತ್ತಿದ್ದ ಬಲೆನೊ ಕಾರು ಡಿವೈಡರ್​​ಗೆ ಡಿಕ್ಕಿಯಾಗಿ ಇನ್ನೊಂದು ಬದಿಗೆ ನೆಗೆದು ಎದುರಿನಿಂದ ಬರುತ್ತಿದ್ದ ಎಕ್ಸ್​ಯುವಿ ಮತ್ತು ಐ10 ಕಾರಿಗೆ ಡಿಕ್ಕಿ ಹೊಡೆದಿದೆ. ತುಮಕೂರು ರಸ್ತೆಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನೆಲಮಂಗಲದ ಗುಂಡೇನಹಳ್ಳಿ ಬಳಿ ಈ ಅಪಘಾತ ಸಂಭವಿಸಿದೆ.

    ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೊಂದು ಭಾರಿ ಅಪಘಾತವಾಗಿದ್ದರೂ ಅದೃಷ್ಟವಶಾತ್​ ಯಾವುದೇ ಪ್ರಾಣ ಹಾನಿಯಾಗಿಲ್ಲ. ಆದರೆ ಸ್ಥಳದಲ್ಲಿ ಬಹಳಷ್ಟು ಸಮಯ ವಾಹನದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ನೆಲಮಂಗಲ ಸಂಚಾರ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಸೂಕ್ತಕ್ರಮ ಕೈಗೊಂಡಿದ್ದಾರೆ.

    ‘ದೈವ ದೇವರೆಂದರೆ ತಮಾಷೆಯಾ?’; ‘ಕಾಂತಾರ’ದ ‘ವರಾಹ ರೂಪಂ’ ಗೀತೆ ರಚಿಸಿದ ಸಾಹಿತಿ ಹೀಗಂದಿದ್ದೇಕೆ?

    ಚಿತ್ರ ವಿಮರ್ಶೆ: ಹಾಡಿನ ಹಕ್ಕಿ ಸೇಡಿನ ಹಕ್ಕಿಯಾಗುವ ಕಥೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts