

ಮಂಡ್ಯ: ಆಸ್ಪತ್ರೆಯಲ್ಲಿದ್ದ ಸಂಬಂಧಿಯನ್ನು ನೋಡಲು ಬಂದವರೇ ಸಾವಿಗೀಡಾದ ಪ್ರಸಂಗವೊಂದು ನಡೆದಿದೆ. ಈ ಪ್ರಕರಣದಲ್ಲಿ ತಾಯಿ ಮೃತಪಟ್ಟರೆ, ಪುತ್ರ ಹಾಗೂ ಮೊಮ್ಮಗಳು ಗಾಯಗೊಂಡಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದೆ.
ಬೆಂಗಳೂರು ಮೈಸೂರು ದಶಪಥದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಈ ಸಾವು-ನೋವು ಉಂಟಾಗಿದೆ. ಮಂಡ್ಯದ ಮದ್ದೂರು ಬಳಿ ಈ ಅಪಘಾತ ಸಂಭವಿಸಿದೆ. ಚನ್ನಪಟ್ಟಣ ಮೂಲದ ವರಲಕ್ಷ್ಮಿ (60) ಸಾವಿಗೀಡಾದ ಮಹಿಳೆ. ಪುತ್ರ ಸುಧಾಕರ್, ಮೊಮ್ಮಗಳು ಗೌತಮಿ ಗಾಯಗೊಂಡಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಯನ್ನು ನೋಡಲು ಬಂದಿದ್ದ ವರಲಕ್ಷ್ಮಿ, ಚನ್ನಪಟ್ಟಣಕ್ಕೆ ಮರಳುತ್ತಿದ್ದಾಗ ಈ ಅಪಘಾತ ನಡೆದಿದೆ. ಈ ಮೂವರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನ ಮತ್ತು ಕ್ಯಾಂಟರ್ ಡಿಕ್ಕಿಯಾಗಿದೆ. ಬಳಿಕ ಹೆದ್ದಾರಿ ಪಕ್ಕದ ತಡೆಗೋಡೆಗೆ ಬೈಕ್ ಅಪ್ಪಳಿಸಿದ್ದು, ಗಂಭೀರ ಗಾಯಗೊಂಡಿದ್ದ ವರಲಕ್ಷ್ಮಿ ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡ ಅವರ ಪುತ್ರ ಮತ್ತು ಮೊಮ್ಮಗಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.