PHOTOS|ದೊಡ್ಡಪ್ಯಾಯಲಗುರ್ಕಿ ಬಳಿ ತಡರಾತ್ರಿ ಭೀಕರ ಅಪಘಾತ; ಸ್ಥಳದಲ್ಲೇ ಮೂವರ ಸಾವು

WhatsApp Image 2020-09-15 at 9.30.41 AM
Published on

ಚಿಕ್ಕಬಳ್ಳಾಪುರ: ತಾಲೂಕಿನ ದೊಡ್ಡಪ್ಯಾಯಲಗುರ್ಕಿ ಸಮೀಪ ತಡರಾತ್ರಿ ಒಂದು ಗಂಟೆ ಸುಮಾರಿಗೆ ಲಾರಿ ಮತ್ತು ಸ್ವಿಫ್ಟ್ ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಒಬ್ಬರ ಸ್ಥಿತಿ ಗಂಭೀರವಾಗಿದೆ.

ಬೆಂಗಳೂರಿನಿಂದ ಹೈದರಾಬಾದ್​ಗೆ ಹೋಗುತ್ತಿದ್ದ ಕಾರಿನಲ್ಲಿ ಒಂದೇ ಕುಟುಂಬ ನಾಲ್ವರು ಇದ್ದರು. ಈ ಪೈಕಿ ಮಹಿಳೆ ಮತ್ತು ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟರೆ, ಹಿರಿಯ ಪುರುಷರೊಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಕೂಡಲೇ ತುರ್ತುಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇವರೆಲ್ಲರೂ ಬೆಂಗಳೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಯಾವ ಮಾದರಿಯ ಕಾರು ಎಂಬುದನ್ನೂ ಗುರುತಿಸಲಾಗದಷ್ಟು ಹಾನಿಗೀಡಾಗಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net