ಟ್ರ್ಯಾಕ್ಟರ್​-ಕಾರು ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಮೂವರಿಗೆ ಗಾಯ

ಕೋಲಾರ: ಟ್ರ್ಯಾಕ್ಟರ್​-ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ.

ಜಿಲ್ಲೆಯ ಮುಳಬಾಗಲು ತಾಲೂಕಿನ ಕಾಂತರಾಜ‌ ಸರ್ಕಲ್ ಬಳಿ ನಿನ್ನೆ ತಡ‌ ರಾತ್ರಿ ಘಟನೆ ನಡೆದಿದ್ದು, ಬೆಂಗಳೂರು ಮೂಲದ ಶಿವಮಮಾರ್ (38) ಮತ್ತು ಕಾರ್ತಿಕ್(36) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಗಾಯಗೊಂಡಿರುವರನ್ನು ಸ್ಥಳೀಯ ‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆ ನಡೆದ ಕೂಡಲೇ ಟ್ರ್ಯಾಕ್ಟರ್ ಚಾಲಕ ಸ್ಥಳದಿಂದ‌ ಪರಾರಿಯಾಗಿದ್ದಾನೆ. ಮೃತ ಶಿವಕುಮಾರ್ ಮತ್ತು ಸಂಬಂಧಿಕರು ಬೆಂಗಳೂರಿನಿಂದ ತಿರುಪತಿಗೆ ಹೋಗುತ್ತಿದ್ದರು ಎನ್ನಲಾಗಿದೆ.

ಮುಳಬಾಗಲು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)