ಅಪಾಯಕಾರಿ ಸೇತುವೆ ಸಂಚಾರ ನಿಷೇಧ

1628703867311
Published on




ಮಂಗಳೂರು : ಬೆಳ್ತಂಗಡಿ ತಾಲೂಕಿನ ರಾಜ್ಯ ಹೆದ್ದಾರಿ-276 ರಸ್ತೆಯ ಕಲ್ಮಂಜ ಗ್ರಾಮದ ಸರಪಳಿ 65ಕಿ.ಮೀ, 66.10ಕಿ.ಮೀ, 67.70 ಕಿ.ಮೀ. ಸೇತುವೆಗಳಲ್ಲಿ ಸಂಚರಿಸುವುದು ಅಪಾಯಕಾರಿಯಾಗಿರುವುದರಿಂದ ಮುಂದಿನ ಆದೇಶದವರೆಗೆ ಈ ಸೇತುವೆಗಳಲ್ಲಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ವಾಹನಗಳು ರಾಷ್ಟ್ರೀಯ ಹೆದ್ದಾರಿ-73ರ ಮೂಲಕ ಸಂಚರಿಸಲು, ಸಂಚಾರಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ.
...................

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net