More

    ರಸ್ತೆ ನಿರ್ಮಾಣಕ್ಕೆ 70 ಲಕ್ಷ ರೂ.ಮಂಜೂರು

    ಗೋಕಾಕ: ಈಚೆಗೆ ಕುಸಿದಿದ್ದ ಮೆಳವಂಕಿ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಬುಧವಾರ ಭೂಮಿಪೂಜೆ ನೆರವೇರಿಸಲಾಯಿತು.

    ಜಿಪಂ ಮಾಜಿ ಸದಸ್ಯ ರಾಜೇಂದ್ರ ಸಣ್ಣಕ್ಕಿ ಮಾತನಾಡಿ, ಸೋಮವಾರ ದಂಡಿನ ಮಾರ್ಗ ರಸ್ತೆಯ ಮೆಳವಂಕಿ ಸೇತುವೆ ಕುಸಿದು ಬಿದ್ದಿದ್ದರಿಂದ ಸಂಚಾರಕ್ಕೆ ಸಮಸ್ಯೆಯಾಗಿದೆ. ಗೋಕಾಕದಿಂದ ಕೌಜಲಗಿ ಮುಖ್ಯ ರಸ್ತೆಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ.

    ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸೇತುವೆ ಕುಸಿತಗೊಂಡ ಕೇವಲ ಒಂದು ಗಂಟೆಯೊಳಗೆ ಸೇತುವೆ ಬಳಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ 70 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.

    ಮೆಳವಂಕಿ ರಸ್ತೆಯ ಮಾರ್ಗದಲ್ಲಿ ಸಂಚರಿಸುವ ಸಾರ್ವಜನಿಕರಿಗೆ ರಸ್ತೆ ನಿರ್ಮಾಣದ ನಂತರ ಅನುಕೂಲವಾಗಲಿದೆ. ಬಾಲಚಂದ್ರ ಜಾರಕಿಹೊಳಿ ಅವರು ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗಬಾರದೆನ್ನುವ ಉದ್ದೇಶದಿಂದ ತಕ್ಷಣವೇ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಅನುದಾನ ನೀಡಿರುವುದು ಅವರ ಜನಪರ ಕಾಳಜಿ ಎತ್ತಿ ತೋರಿಸುತ್ತದೆ ಎಂದರು. ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ, ಸಿದ್ದಪ್ಪ ಹಂಜಿ, ಮಹಾದೇವ ಪತ್ತಾರ, ಭೀಮಪ್ಪ ಚಿಪ್ಪಲಕಟ್ಟಿ, ಈರಪ್ಪ ಭೀರನಗಡ್ಡಿ, ಸತ್ತೆಪ್ಪ ಬಬಲಿ, ಅಲ್ಲಪ್ಪ ಕಂಕಣವಾಡಿ, ರಾಮಪ್ಪ ಕಾಪಸಿ, ಸಣ್ಣದೊಡ್ಡಪ್ಪ ಕರೆಪ್ಪಣ್ಣವರ, ಮುತ್ತೆಪ್ಪ ಹಡಗಿನಾಳ, ನಾಗಪ್ಪ ಮಂಗಿ, ಕಾಮಶಿ ಕರೆಣ್ಣವರ, ಎ.ಎಸ್.ಅಗ್ನೆಪ್ಪಗೋಳ, ರಮೇಶ ಭೀರನಗಡ್ಡಿ, ಹನುಮಂತಗೌಡ ಪಾಟೀಲ, ಎಇ ನಾಗಾಭರಣ.ಕೆ.ಪಿ., ಗುತ್ತಿಗೆದಾರ ಹನುಮಂತ ದಾಸನವರ ಉಪಸ್ಥಿತರಿದ್ದರು.

    ಬದಾಮಿ-ಗೊಡಚಿ-ಗೋಕಾಕ ಫಾಲ್ಸ್ ರಾಜ್ಯ ಹೆದ್ದಾರಿ 134 ಚೈನೆಜ್ 107.8 ರಲ್ಲಿ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಸಾರ್ವಜನಿಕರ ಸಂಚಾರಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ 70 ಲಕ್ಷ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ರೈತರು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕುಸಿದು ಬಿದ್ದಿರುವ ಮೆಳವಂಕಿ ಸೇತುವೆ ಪಕ್ಕ ಸಂಚಾರಕ್ಕಾಗಿ ತಾತ್ಕಾಲಿಕ ರಸ್ತೆ ನಿರ್ಮಾಣಮಾಡಲಾಗುತ್ತಿದೆ. ಕಾಮಗಾರಿ ತ್ವರಿತಗತಿಯಲ್ಲಿ ಸಾಗಿ 15 ದಿನಗಳೊಳಗಾಗಿ ರಸ್ತೆ ಸಂಚಾರಕ್ಕೆ ಮುಕ್ತವಾಗಲಿದೆ.
    | ಬಾಲಚಂದ್ರ ಜಾರಕಿಹೊಳಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts