ಸಿದ್ದಾಪುರ: ತಾಲೂಕಿನ ಕಾನಗೋಡ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಮಾರಿಗುಡಿ ಮಾರ್ಗದ ರಸ್ತೆ ನಿರ್ಮಾಣ ಕಾಮಗಾರಿಗೆ ಶಾಸಕ ಭೀಮಣ್ಣ ನಾಯ್ಕ ಭೂಮಿ ಪೂಜೆ ನೆರವೇರಿಸಿದರು.
ಕಾನಗೋಡ ಗ್ರಾಪಂ ವ್ಯಾಪ್ತಿಯ ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಹಳ್ಳಿಬೈಲ್ ಮಾರಿಗುಡಿ ಮಾರ್ಗವಾಗಿ ಬಾಸಿಂಗ್ ಕಟ್ಟೆಯವರೆಗಿನ ರಸ್ತೆ ಕಳೆದ ಅನೇಕ ವರ್ಷಗಳಿಂದ ದುರಸ್ತಿ ಕಾಣದೇ ಹದಗೆಟ್ಟು ಸಂಚಾರಕ್ಕೆ ಪರದಾಡುವ ಸ್ಥಿತಿ ನಿರ್ವಣವಾಗಿತ್ತು. ಗ್ರಾಮಸ್ಥರು ಶಾಸಕ ಭೀಮಣ್ಣ ನಾಯ್ಕ ಅವರನ್ನು ಭೇಟಿಯಾಗಿ ಆದ್ಯತೆಯ ಮೇರೆಗೆ ರಸ್ತೆ ನಿರ್ವಿುಸಿಕೊಡುವಂತೆ ಆಗ್ರಹಿಸಿದ್ದರು. ಮನವಿಗೆ ಸ್ಪಂದಿಸಿದ ಶಾಸಕ ಭೀಮಣ್ಣ ನಾಯ್ಕ , ರಸ್ತೆ ಅಭಿವೃದ್ಧಿಗೆ ಅನುದಾನ ನೀಡಿದ್ದು, ಕಾನಗೋಡಿನ ಮಾರಿಕಾಂಬಾ ದೇವಿಗೆ ಪೂಜೆ ಸಲ್ಲಿಸಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಪ್ರಸಕ್ತ ಸಾಲಿನ ಫೆಬ್ರವರಿಯಲ್ಲಿ ಕಾನಗೋಡ ಜಾತ್ರೆ ಇರುವುದರಿಂದ ತಕ್ಷಣ ಕೆಲಸ ಪ್ರಾರಂಭಿಸಿ ಶೀಘ್ರದಲ್ಲಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಕಾನಗೋಡ ಗ್ರಾಪಂ ಅಧ್ಯಕ್ಷ ಶಿವರಾಯ ನಾಯ್ಕ, ಭೂ ನ್ಯಾಯ ಮಂಡಳಿ ಸದಸ್ಯ ಎಚ್.ಕೆ. ಶಿವಾನಂದ, ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಕೆರಿಯಾ ನಾಯ್ಕ ಸಣ್ಣಟ್ಟಿ, ಪ್ರಧಾನ ಕಾರ್ಯದರ್ಶಿ ಶಂಕರ ನಾಯ್ಕ ಕೇಶವ ನಾಯ್ಕ ಹಾಗೂ ಇತರರಿದ್ದರು.