ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪರಿಹಾರ

land

ವಿಜಯವಾಣಿ ಸುದ್ದಿಜಾಲ ಬೈಂದೂರು

ರಾಷ್ಟ್ರೀಯ ಹೆದ್ದಾರಿ 766ಸಿ ದ್ವಿಪಥ ರಸ್ತೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿ ಎರಡು ವರ್ಷ ಕಳೆದಿದ್ದು, ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ, ಬೈಂದೂರು ಕ್ಷೇತ್ರ ವ್ಯಾಪ್ತಿಯ ಕೊಲ್ಲೂರಿನಿಂದ ಯಡ್ತರೆ ತನಕ ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಾಗಿ ಕಾಮಗಾರಿ ಆರಂಭಕ್ಕೆ ಹಿನ್ನಡೆಯಾಗಿದೆ. ಸಂಬಂಧಿತ ಇಲಾಖೆ ಈ ಬಗ್ಗೆ ವಿಶೇಷ ಮುತುವರ್ಜಿವಹಿಸಿ ರೈತರಿಗೆ ಯಾವುದೇ ಅನ್ಯಾಯವಾಗದಂತೆ ಗರಿಷ್ಠ ಪರಿಹಾರ ನೀಡುವ ಮೂಲಕ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ಸಂಸದ ಬಿ.ವೈ.ರಾಘವೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಾಲೂಕು ಆಡಳಿತ ಸೌಧದಲ್ಲಿ ಮಂಗಳವಾರ ರಾಷ್ಟ್ರೀಯ ಹೆದ್ದಾರಿ 766ಸಿ ಭೂಸ್ವಾಧೀನ ಕುರಿತು ಅಧಿಕಾರಿಗಳ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಷ್ಟ್ರೀಯ ಹೆದ್ದಾರಿ ದ್ವಿಪಥ ಕಾಮಗಾರಿ ಬಗ್ಗೆ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದ ಸಂಸದರು, ರೈತರು ತಮ್ಮ ಭೂಮಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದು, ಅಭಿವೃದ್ಧಿ ಕಾರ್ಯ ನಡೆಯಬೇಕಾದರೆ ಭೂಮಿ ಅಗತ್ಯವಾಗಿರುವುದರಿಂದ ಭೂಸ್ವಾಧೀನ ಪ್ರಕ್ರಿಯೆ ನಡೆಸುವುದು ಅನಿವಾರ್ಯ. ಸಂತ್ರಸ್ತ ಕುಟುಂಬಗಳಿಗೆ ಸರ್ಕಾರದ ಮಾನದಂಡದಂತೆ ಗರಿಷ್ಠ ಪರಿಹಾರ ವಿತರಿಸಲಾಗುತ್ತದೆ, ಈ ಬಗ್ಗೆ ರೈತರು ನಮ್ಮೊಂದಿಗೆ ಸಹಕರಿಸಬೇಕೆಂದು ಮನವಿ ಮಾಡಿದರು.

ಬೈಂದೂರು ಕ್ಷೇತ್ರ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ ಗೊಂದಲದಿಂದ ಹಲವು ಕುಟುಂಬಗಳಿಗೆ ಅನ್ಯಾಯವಾಗಿದೆ ಎಂದು ಸಾರ್ವಜನಿಕರಿಂದ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಇಲ್ಲಿನ ಭೂಸ್ವಾಧೀನ ಪ್ರಕ್ರಿಯೆ ಬಗ್ಗೆ ಪ್ರತ್ಯೇಕ ಸಮಿತಿ ರಚಿಸಲಾಗುವುದು ಎಂದರು. ಸಮಿತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು, ಭೂಸ್ವಾಧೀನಾಧಿಕಾರಿ, ತೋಟಗಾರಿಕೆ, ಸಬ್‌ರಿಜಿಸ್ಟ್ರಾರ್, ಪೊಲೀಸ್ ಸಹಿತ ಸಂಬಂಧಿತ ಇಲಾಖೆ ಹಿರಿಯ ಅಧಿಕಾರಿಗಳಿದ್ದು, ಅವರ ನೇತೃತ್ವದಲ್ಲಿ ಜಂಟಿ ಸರ್ವೇ ನಡೆಸಿ, ಶೀಘ್ರ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದರು.
ಶಾಸಕ ಗುರುರಾಜ್ ಗಂಟಿಹೊಳೆ, ಎನ್‌ಎಚ್ ಅಧಿಕಾರಿಗಳು, ಡಿಎಫ್‌ಓ, ಕುಂದಾಪುರ ಸಹಾಯಕ ಕಮೀಷನರ್, ವೃತ್ತ ನಿರೀಕ್ಷಕ ಸಹಿತ ಹಲವು ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪರಿಹಾರ ಪ್ರಮಾಣ

ರಾಷ್ಟ್ರೀಯ ಹೆದ್ದಾರಿಗಾಗಿ ಭೂಮಿ, ಕಟ್ಟಡ, ತೋಟ ಹಾಗೂ ಮರ ಕಳೆದುಕೊಂಡ ಸಂತ್ರಸ್ತರಿಗೆ ಸರ್ಕಾರದ ಮಾನದಂಡದಂತೆ ಪರಿಹಾರ ಒದಗಿಸಲಾಗುತ್ತದೆ. ಸಂಬಂಧಿತ ಇಲಾಖೆ ಸಿದ್ಧಪಡಿಸಿದ ನಷ್ಟದ ಅಂದಾಜು ಪಟ್ಟಿಯಂತೆ ಪಪಂ ವ್ಯಾಪ್ತಿಯಲ್ಲಿ ಕಳೆದುಕೊಂಡ ಮೌಲ್ಯದ ಎರಡು ಪಟ್ಟು, ಪಪಂ ವ್ಯಾಪ್ತಿಯಿಂದ 5ಕಿ.ಮೀ. ದೂರದವರೆಗೆ ಮೂರು ಪಟ್ಟು ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ನಾಲ್ಕು ಪಟ್ಟು ಪರಿಹಾರ ವಿತರಿಸಲಾಗುತ್ತದೆ. ಬೈಂದೂರು ಪಪಂ ವ್ಯಾಪ್ತಿಯ ಯಡ್ತರೆಯಿಂದ ಸುಮಾರು 3.8ಕಿ.ಮೀ ದೂರದವರೆಗೆ ರಸ್ತೆಯ ಎರಡು ಭಾಗದಲ್ಲಿ ತಲಾ 8ಮೀ ಹಾಗೂ ಬಳಿಕ ಹಾಲ್ಕಲ್‌ವರೆಗೆ ರಸ್ತೆ ಎರಡು ಭಾಗದಲ್ಲಿ ತಲಾ 15ಮೀ. ಜಾಗ ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದರು.

Share This Article

Curry Leaf Juice ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕರಿಬೇವಿನ ಎಲೆಯ ರಸ ಕುಡಿಯಿರಿ..ಬೊಜ್ಜು ಕಡಿಮೆಯಾಗುತ್ತದೆ..

Curry Leaf Juice : ಕರಿಬೇವಿನ ಎಲೆಗಳನ್ನು ಆಯುರ್ವೇದದಲ್ಲಿ ಔಷಧಿ ಎಂದು ಪರಿಗಣಿಸಲಾಗಿದೆ. ವಿಶೇಷವೆಂದರೆ ಇಷ್ಟೆಲ್ಲಾ…

Health Tips : ನೀವು ಮಧ್ಯರಾತ್ರಿ ಎಚ್ಚರಗೊಳ್ಳುತ್ತೀರಾ? ಆರೋಗ್ಯ ಸಮಸ್ಯೆ ಇರೋದು ಪಕ್ಕಾ…

Health Tips : ಮನುಷ್ಯನಿಗೆ ಆಹಾರ ಮತ್ತು ನೀರು ಎಷ್ಟು ಮುಖ್ಯವೋ ನಿದ್ರೆಯೂ ಅಷ್ಟೇ ಮುಖ್ಯ…

‘ಗೋಲ್ಡನ್ ಮಿಲ್ಕ್’ ಮಾಡುವ ಸರಿಯಾದ ವಿಧಾನ ಇಲ್ಲಿದೆ; ಉತ್ತಮ ಆರೋಗ್ಯಕ್ಕಾಗಿ ಈ Recipe

ಒಂದು ಚಮಚ ಅರಿಶಿನವನ್ನು ಹಾಲಿನಲ್ಲಿ ಬೆರೆಸಿ ಕುಡಿದರೆ ಅದು ದೇಹಕ್ಕೆ ವರದಾನವಾಗಿದೆ. ಅರಿಶಿನ ಹಾಲು ಅನೇಕ…