More

    ರಸ್ತೆ ಅತಿಕ್ರಮಿಸಿ ಕಾಂಪೌಂಡ್ ನಿರ್ಮಾಣ

    ಕುಷ್ಟಗಿ: ಸಾರ್ವಜನಿಕ ರಸ್ತೆಯನ್ನು ಅತಿಕ್ರಮಿಸಿ ನಿರ್ಮಿಸಿರುವ ಕಾಂಪೌಂಡ್ ತೆರವುಗೊಳಿಸುವಂತೆ ಪಟ್ಟಣದ ನಿವಾಸಿ ಶರಣಪ್ಪ ತಲೇಖಾನ್ ಕಳೆದ 3ವರ್ಷದಿಂದ ಪುರಸಭೆಗೆ ಅಲೆಯುತ್ತಿದ್ದಾರು ಅಧಿಕಾರಿಗಳು ಮಾತ್ರ ಸ್ಥಳ ಪರಿಶೀಲನೆ ಮಾಡದೆ ನಿರ್ಲಕ್ಷೃ ವಹಿಸಿದ್ದಾರೆ.

    ಇದನ್ನೂ ಓದಿ: ರಸ್ತೆ ಅತಿಕ್ರಮಿಸಿ ನಿರ್ಮಿಸಿದ್ದ ಕಾಂಪೌಂಡ್ ತೆರವು

    ಪಟ್ಟಣದ ಬಿಬಿ ನಗರ 3ನೇ ವಾರ್ಡ್‌ನ ಬುತ್ತಿ ಬಸವೇಶ್ವರ ದೇವಸ್ಥಾನದ ಹಿಂಭಾಗದ ರಸ್ತೆಗೆ ಸಂಪರ್ಕಿಸುವ ರೋಡ್ ಪಕ್ಕದ ನಿವಾಸಿಯೊಬ್ಬರು ರಸ್ತೆಯನ್ನು ಆಕ್ರಮಿಸಿ ಕಾಂಪೌಂಡ್ ನಿರ್ಮಿಸಿಕೊಂಡಿದ್ದಾರೆ.

    ಪಕ್ಕದ ಖಾಲಿ ನಿವೇಶನದಲ್ಲಿ ಜನ ಓಡಾಡುತ್ತಿದ್ದಾರೆ. ಅಲ್ಲಿಯೂ ಮನೆ ನಿರ್ಮಿಸಿದರೆ ಓಡಾಟಕ್ಕೆ ತೊಂದರೆಯಾಗುತ್ತದೆ. ಸಾರ್ವಜನಿಕರ ಹಿತಾಸಕ್ತಿಯಿಂದ 2021ರಿಂದ ಪುರಸಭೆಗೆ ಕಾಂಪೌಂಡ್ ತೆರವಿಗೆ ಪತ್ರ ಬರೆದು ಮನವಿ ಮಾಡುತ್ತ ಬಂದರೂ ಪ್ರಯೋಜನವಾಗಿಲ್ಲ.

    ಈ ಸಂಬಂಧ ದೂರು ಆಧರಿಸಿ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳು 2022ರ ಅ.28ರಂದು ಪೌರಾಡಳಿತ ನಿರ್ದೇಶನಾಯಲದ ಜಂಟಿ ನಿರ್ದೇಶಕರಿಗೆ ಪತ್ರ ಬರೆದು ಸೂಕ್ತ ಕ್ರಮಕ್ಕೆ ಸೂಚಿಸಿದ್ದಾರೆ.

    ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳ ಸೂಚನೆಯಂತೆ ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕರು 2022ರ ನ.23ರಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ನಿಯಮಾನುಸಾರ ಪರಿಶೀಲನೆ ನಡೆಸಿ ತಮ್ಮ ಹಂತದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ. ಆದಾಗ್ಯೂ ಯಾವ ಅಧಿಕಾರಿಗಳೂ ಸ್ಥಳ ಪರಿಶೀಲನೆಯನ್ನೂ ಮಾಡಿಲ್ಲ ಎಂದು ದೂರುದಾರ ಪತ್ರಿಕೆಗೆ ತಿಳಿಸಿದ್ದಾರೆ.

    ಬಿಬಿ ನಗರದಲ್ಲಿ ರಸ್ತೆ ಅತಿಕ್ರಮಿಸಿ ನಿವಾಸಿಯೊಬ್ಬರು ಕಂಪೌಂಡ್ ನಿರ್ಮಿಸಿಕೊಂಡಿರುವುದು ಗಮನಕ್ಕಿದೆ. ನೀರಿನ ಸಮಸ್ಯೆ ಇನ್ನಿತರ ಕಾರಣಗಳಿಂದ ಸ್ಥಳ ಪರಿಶೀಲನೆ ಸಾಧ್ಯವಾಗಿಲ್ಲ. ನಾಳೆಯೇ ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು.
    ಧರಣೇಂದ್ರಕುಮಾರ್, ಪುರಸಭೆ ಮುಖ್ಯಾಧಿಕಾರಿ ಕುಷ್ಟಗಿ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts