ಬೆಳಗಾವಿ: ಮಹಾನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಬಿದ್ದಿರುವ ಗುಂಡಿ ಮುಚ್ಚಲು ತುರ್ತಾಗಿ 4 ಲಕ್ಷ ರೂ. ಬಿಡುಗಡೆಗೆ
ಆದೇಶಿಸಲಾಗಿದೆ ಎಂದು ನಗರ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಯತೀರ್ಥ ಸವದತ್ತಿ ತಿಳಿಸಿದರು.
ನಗರದ ಪಾಲಿಕೆ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ನಗರ ಯೋಜನೆ ಮತ್ತು ನಗರ ಅಭಿವೃದ್ಧಿ ಸಮಿತಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಗರದಲ್ಲಿ ಬಿದ್ದಿರುವ ಗುಂಡಿಗಳಿಂದಾಗಿ ವಾಹನ ಸವಾರರು, ಜನಸಾಮಾನ್ಯರು ನಿತ್ಯ ಕಿರಿಕಿರಿ ಅನುಭವಿಸುತ್ತಿದ್ದಾರೆ. ಕೂಡಲೆ ರಸ್ತೆ ಗುಂಡಿ ಮುಚ್ಚುವ ಕೆಲಸ ಆರಂಭಿಸಬೇಕು. ಪ್ರತಿ ವಲಯಕ್ಕೆ 1 ಲಕ್ಷ ರೂ.ರಂತೆ ನಾಲ್ಕು ಲಕ್ಷ ರೂ. ಬಿಡುಗಡೆ ಮಾಡಲಾಗುತ್ತಿದೆ. ಜು.25ರಿಂದ ಕಾಮಗಾರಿ ಆರಂಭಿಸಬೇಕು ಎಂದು ಸೂಚಿಸಿದರು.
ಪಾಲಿಕೆ ಜೆಇ, ಎಇಇಗಳು ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಬೇಕು. ವಾರದ ಒಳಗಾಗಿ ಗುಂಡಿ ಮುಚ್ಚುವ, ರಸ್ತೆಯ ಮೇಲೆ ನಿಂತಿರುವ ನೀರು ತೆರವುಗೊಳಿಸುವ ಕೆಲಸ ಮುಗಿಸಬೇಕು ಎಂದು ತಿಳಿಸಿದರು. ಮೇಯರ್ ಸವಿತಾ ಕಾಂಬಳೆ, ಉಪಮೇಯರ್ ಆನಂದ ಚೌಹಾಣ, ಉದಕುಮಾರ ಉಪರಿ, ಸಂತೋಷ ಪೇಡನೇಕರ್ ಇತರರಿದ್ದರು.
ಸಾಂಕ್ರಾಮಿಕ ರೋಗ ನಿಯಂತ್ರಿಸಿ: ಡೆಂೆ ರೋಗ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕ ಆರೋಗ್ಯ,ಶಿಕ್ಷಣ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಶ್ರೀಶೈಲ ಕಾಂಬಳೆ ಹೇಳಿದರು. ಪಾಲಿಕೆ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಿತಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಸೂಕ್ತ ಚಿಕಿತ್ಸೆ ಸಿಗಬೇಕು. ಜಿಲ್ಲಾಸ್ಪತ್ರೆಗಳಲ್ಲಿ ರಕ್ತ ಪರೀಕ್ಷೆಗೆ ಒತ್ತು ನೀಡಬೇಕು ಎಂದು ಸೂಚಿಸಿದರು.