More

    ಗುಂಡಿ ಬಿದ್ದ ರಸ್ತೆ ಸರಿಪಡಿಸಲು ಆಗ್ರಹ: ಪಿಡಬ್ಲುೃಡಿ ಎಇಇಗೆ ರಕ್ಷಣಾ ವೇದಿಕೆ ಮನವಿ

    ಕೆ.ಆರ್.ಪೇಟೆ: ತಾಲೂಕಿನಾದ್ಯಂತ ಗುಂಡಿ ಬಿದ್ದು ಹಾಳಾಗಿರುವ ರಸ್ತೆಗಳನ್ನು ಸರಿಪಡಿಸಬೇಕು. ಕಳಪೆ ಕಾಮಗಾರಿಯನ್ನು ನಡೆಸಿ ಸರ್ಕಾರದ ಹಣವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟಣದ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್‌ಗೆ ಗುರುವಾರ ಮನವಿ ಸಲ್ಲಿಸಿದರು.
    ಮೈಸೂರು ಚನ್ನರಾಯಪಟ್ಟಣ ರಸ್ತೆ, ಕೆ.ಆರ್.ಪೇಟೆ ಶ್ರವಣಬೆಳಗೊಳ ರಸ್ತೆ, ಕಿಕ್ಕೇರಿ ಊಗಿನಹಳ್ಳಿ ಮಾದಾಪುರ ರಸ್ತೆ ಸೇರಿದಂತೆ ಬಹುತೇಕ ಗ್ರಾಮೀಣ ಸಂಪರ್ಕ ರಸ್ತೆಗಳಲ್ಲಿ ಭಾರಿ ಪ್ರಮಾಣದಲ್ಲಿ ಗುಂಡಿ ಬಿದ್ದಿದ್ದು ಸಂಪೂರ್ಣವಾಗಿ ವಾಹನಗಳು ಸೇರಿದಂತೆ ಜನರು ಸಂಚರಿಸಲು ಕಷ್ಟ್ಟಕರವಾಗಿದೆ. ಗುಂಡಿ ಬಿದ್ದಿರುವ ರಸ್ತೆಗಳಲ್ಲಿ ದಿನಕ್ಕೆ ನಾಲ್ಕೈದು ಅಪಘಾತಗಳು ಸಂಭವಿಸುತ್ತಿವೆ. ಇತ್ತೀಚೆಗೆ ಹಲವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಕೂಡಲೇ ರಸ್ತೆ ದುರಸ್ತಿ ಮಾಡಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಎಇಇ ರಾಜಶೇಖರ್ ಅವರಿಗೆ ಮನವಿ ಪತ್ರವನ್ನು ನೀಡಿದರು.
    ವೇದಿಕೆ ತಾಲೂಕು ಅಧ್ಯಕ್ಷ ವೇಣು, ಪದವೀಧರರ ಘಟಕದ ಅಧ್ಯಕ್ಷ ಸಿ.ಬಿ.ಚೇತನ್‌ಕುಮಾರ್, ನಗರ ಅಧ್ಯಕ್ಷ ಮದನ್‌ಗೌಡ, ಯುವ ಘಟಕದ ಅಧ್ಯಕ್ಷ ಆನಂದ, ಉಪಾಧ್ಯಕ್ಷ ಶ್ರೀನಿವಾಸ್, ಸಂಚಾಲಕ ಜಹೀರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts