More

    ಗುಂಡಿ ಬಿದ್ದ ರಸ್ತೆ ದುರಸ್ತಿ ಕಾಮಗಾರಿ ಆರಂಭ

    ಕೊಳ್ಳೇಗಾಲ: ಒಳಚರಂಡಿ ಪೈಪ್‌ಲೈನ್ ಕಾಮಗಾರಿ ವೇಳೆ ಹದಗೆಟ್ಟಿದ್ದ ಪಟ್ಟಣದ ನಾಯಕರ ದೊಡ್ಡ ಬೀದಿಯಲ್ಲಿ ಹಾದು ಹೋಗಿರುವ ಕಲಿಯೂರು-ಮುಳ್ಳೂರು ಮುಖ್ಯರಸ್ತೆಯ ದುರಸ್ತಿ ಕಾಮಗಾರಿ ಆರಂಭಗೊಂಡಿದೆ.

    ನಂ.1 ಕನ್ನಡ ದಿನಪತ್ರಿಕೆ ವಿಜಯವಾಣಿ ಇತ್ತೀಚೆಗೆ ‘ನಿತ್ಯನರಕವಾದ ಗುಂಡಿಬಿದ್ದ ಹೆದ್ದಾರಿ’ ಎಂಬ ಶೀರ್ಷಿಕೆಯಡಿ ವರದಿ ಪ್ರಕಟಿಸತ್ತು. ಈ ಹೆದ್ದಾರಿ ಮಹದೇಶ್ವರ ಬೆಟ್ಟ ಹಾಗೂ ಶ್ರೀರಂಗಪಟ್ಟಣಕ್ಕೆ ಸಂಪರ್ಕ ಕಲ್ಪಿಸಲಿದೆ. ವರ್ಷದ ಹಿಂದೆ ಪಟ್ಟಣದ 10ನೇ ವಾರ್ಡ್ ವ್ಯಾಪ್ತಿಯ ನಾಯಕರ ದೊಡ್ಡ ಬೀದಿಯ ಶ್ರೀ ಗಣೇಶನ ದೇವಾಲಯದಿಂದ ಭೀಮನಗರದ ಪಶ್ಚಿಮದ್ವಾರದವರೆಗೂ ಕೈಗೊಂಡಿದ್ದ ಒಳಚರಂಡಿ ಪೈಪ್ ಅಳವಡಿಕೆ ಕಾಮಗಾರಿ ವೇಳೆ ರಸ್ತೆಯನ್ನು ಅಗೆದು ಹಾಕಲಾಗಿತ್ತು. ಕಾಮಗಾರಿ ಮುಗಿದ ಬಳಿಕ ಕರ್ನಾಟಕ ಒಳಚರಂಡಿ ಮಂಡಳಿ ಅಧಿಕಾರಿಗಳು ಗುಂಡಿಗೆ ತೇಪೆ ಹಾಕಿರಲಿಲ್ಲ. ಪರಿಣಾಮ ರಸ್ತೆಯಲ್ಲಿ ಅಡಿಗಡಿಗೂ ಹಳ್ಳ-ಕೊಳ್ಳ ನಿರ್ಮಾಣವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿತ್ತು. ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದರು. ರಸ್ತೆ ದುರಸ್ತಿಗೆ ಕ್ರಮವಹಿಸುವಂತೆ ಆಗ್ರಹಿಸಿದ್ದರು.

    ಈ ಬಗ್ಗೆ ‘ವಿಜಯವಾಣಿ’ ಪತ್ರಿಕೆ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕರ್ನಾಟಕ ಒಳ ಚರಂಡಿ ಮಂಡಳಿ ಅಧಿಕಾರಿಗಳು ಎಚ್ಚೆತ್ತು ಇದೀಗ ಗುಂಡಿ ಬಿದ್ದ ರಸ್ತೆಗೆ ಸಿಮೆಂಟ್ ಕಾಂಕ್ರೀಟ್ ತೇಪೆ ಹಾಕುವ ಕಾಮಗಾರಿ ಆರಂಭಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts