16 C
Bangalore
Thursday, December 12, 2019

ನಾಗರಮುನ್ನೋಳಿ: ರಸ್ತೆ ಸವಾರರಿಗೆ ಟೋಲ್ ಬಿಸಿ

Latest News

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

|ಲಾಲಸಾಬ ತಟಗಾರ ನಾಗರಮುನ್ನೋಳಿ

ಕೆ-ಶಿಪ್‌ದಿಂದ ನಿರ್ಮಾಣವಾದ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ರಸ್ತೆಯ ಬಳಕೆದಾರರಿಂದ ಟೋಲ್ ಸಂಗ್ರಹಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಪ್ರಯಾಣಿಕರು ಮುಂದಿನ ದಿನಗಳಲ್ಲಿ ಟೋಲ್ ಶುಲ್ಕ ಪಾವತಿಸಿ ಸಂಚಾರ ನಡೆಸಬೇಕಿದೆ.

ನಿಪ್ಪಾಣಿ-ಮುಧೋಳ 109 ಕಿ.ಮೀ. ರಾಜ್ಯ ಹೆದ್ದಾರಿ ದ್ವೀಪಥ ರಸ್ತೆ ಆಗಿದೆ. ಹೆದ್ದಾರಿಯ ಚಿಂಚಣಿ ಮತ್ತು ಕಬ್ಬೂರ ಹತ್ತಿರ 2 ಕಡೆಗಳಲ್ಲಿ ಟೋಲ್‌ಗೇಟ್ ಕಾಮಗಾರಿ ಆರಂಭವಾಗಿದೆ. ಆದಷ್ಟು ಬೇಗ ಶುಲ್ಕ ವಸೂಲಾತಿ ಪ್ರಕ್ರಿಯೆ ಆರಂಭವಾಗಲಿದೆ.

ವಾಹನ ಸವಾರರು ಚಿಂಚಣಿ ಹಾಗೂ ಕಬ್ಬೂರ ಬಳಿ ಟೋಲ್ ಶುಲ್ಕ ಪಾವತಿಸಿ ಪ್ರಯಾಣಿಸಬೇಕು. ಕೆ-ಶ್ಿ ಹಾಗೂ ಕೆಆರ್‌ಡಿಸಿಎಲ್ ಸಂಸ್ಥೆ ವಿಶ್ವಬ್ಯಾಂಕ್ ಹಾಗೂ ಎಡಿಬಿಯಿಂದ ಸಾಲ ಪಡೆದು ರಾಜ್ಯದ ವಿವಿಧೆಡೆಗಳಲ್ಲಿ 3,800 ಕಿ.ಮೀ. ರಸ್ತೆ ನಿರ್ಮಿಸಲಾಗಿದೆ. ಈ ಎಲ್ಲ ರಸ್ತೆಗಳಿಗೆ ಟೋಲ್ ಸಂಗ್ರಹಿಸಲು ರಾಜ್ಯ ಸರ್ಕಾರ 2015ರಲ್ಲಿ ಟೋಲ್ ಸಂಗ್ರಹ ನಿಯಮಾವಳಿ ರಚಿಸಿದೆ.

2017ರಲ್ಲಿ ಟೋಲ್ ಸಂಗ್ರಹಕ್ಕೆ ಟೆಂಡರ್ ನೀಡಿದ್ದು, ವಿನಯಾ ಲಾಡ್ ಎಂಟರಪ್ರೆಸಿಸ್ ಸಂಸ್ಥೆಯು ಟೋಲ್ ಸಂಗ್ರಹಿಸಲು ಟೆಂಡರ್ ಹಿಡಿದಿದೆ. ಶೀಘ್ರ ರಾಜ್ಯ ಸರ್ಕಾರ ಯಾವ ವಾಹನಗಳಿಗೆ ಎಷ್ಟೇಷ್ಟು ಶುಲ್ಕ ಪಾವತಿಸಬೇಕೆಂಬುದನ್ನು ನಿಗದಿಮಾಡಬೇಕಿದೆ. ಆಗಸ್ಟ್ ಮೊದಲ ವಾರದಲ್ಲಿ ಶುಲ್ಕದ ಮಾಹಿತಿ ದೊರೆಯಲಿದೆ.
ಸ್ಥಳೀಯರಿಗೆ ರಿಯಾಯಿತಿ ಪಾಸ್: ರಾಜ್ಯ ಹೆದ್ದಾರಿ ಮೇಲೆ ಟೋಲ್ ಪಾವತಿಸುವ ಪ್ರಯಾಣಿಕರಿಗೆ ದೊಡ್ಡ ತಲೆನೋವಾಗಿದೆ. ಈಗಾಗಲೇ ಜಿಲ್ಲಾ ಸ್ಥಾನಮಾನ ಹೊಂದಿರುವ ಚಿಕ್ಕೋಡಿ ಪಟ್ಟಣಕ್ಕೆ ಕಬ್ಬೂರ ಪಟ್ಟಣದ ವಾಹನ ಸವಾರರು ನಿತ್ಯ ಸಾವಿರಾರು ಸಂಖ್ಯೆಯಲ್ಲಿ ಪ್ರಯಾಣಿಸುತ್ತಾರೆ. ಇದರಿಂದ ಟೋಲ್ ಶುಲ್ಕ ಹೊರೆ ಆಗುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದರಿಂದ ಸ್ವಂತ ವಾಹನ ಹೊಂದಿರುವ ಮಾಲೀಕರಿಗೆ ಸರ್ಕಾರ ರಿಯಾಯಿತಿ ಪಾಸ್ ನೀಡುವ ವ್ಯವಸ್ಥೆ ಕಲ್ಪಿಸಬಹುದು ಎನ್ನುತ್ತಾರೆ ಕೆಆರ್‌ಡಿಸಿಎಲ್ ಅಕಾರಿಗಳು.

ಸ್ಥಳೀಯವಾಗಿ ವಿರೋಧ ನಡೆಸುವ ಸಾಧ್ಯತೆ ಹೆಚ್ಚಿದ್ದು, ರಾಜ್ಯ ಹೆದ್ದಾರಿಗಳಲ್ಲಿ ಇದೆ ಮೊದಲ ಬಾರಿಗೆ ಟೋಲ್ ಸಂಗ್ರಹ ಮಾಡುತ್ತಿರುವುದು ಈ ಭಾಗದ ಜನರ ಅಸಮಾಧಾನಕ್ಕೆ ಕಾರಣವಾಗಿದೆ. ಕೂಡಲೆ ಇಂತಹ ಟೋಲ್ ಸಂಗ್ರಹ ವಸೂಲಾತಿ ನಿಲ್ಲಿಸಬೇಕು. ತಪ್ಪಿದ್ದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯ ಸೀತಲ್ ಜಕಾತಿ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರ ಟೋಲ್ ವಸೂಲಾತಿಯಿಂದ ಸಾಮಾನ್ಯ ಜನರಿಗೆ ಹೆಚ್ಚಿನ ಹೊರೆಯಾಗಿದೆ. ಇದನ್ನು ರಿಯಾತಿಯಲ್ಲಿ ರೈತರಿಗೆ ಸಾಮಾನ್ಯ ಜನರಿಗೆ ಅನಕೂಲ ಕಲ್ಪಿಸಬೇಕು.
| ಕಾಶಪ್ಪ ಗಿಜನ್ನವರ ಗ್ರಾಮಸ್ಥರು ನಾಗರಮುನ್ನೋಳಿ

ಸರ್ಕಾರ ಟೋಲ್ ಸಂಗ್ರಹ ಮಾಡಲು ಆದೇಶ ನೀಡಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದೆ. ಮುಂದಿನ ದಿನಗಳಲ್ಲಿ ಟೋಲ್ ಶುಲ್ಕ ವಸೂಲಾತಿ ನಡೆಯಲಿದೆ.
|ನಾರಾಯಣ ಕುರಂಧಕರ ಕಾರ್ಯನಿರ್ವಾಹಕ ಅಭಿಯಂತ ಕೆಆರ್‌ಡಿಸಿಎಲ್ ಹುಬ್ಬಳ್ಳಿ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...