More

    ಸಂಚಾರ ನಿಯಮ ಪಾಲಿಸಿ

    ಹಿರಿಯೂರು: ವಾಹನ ಚಾಲಕರು ಕಡ್ಡಾಯವಾಗಿ ರಸ್ತೆ ನಿಯಮ ಪಾಲಿಸುವುದರ ಮೂಲಕ ಅಪಘಾತ ತಡೆಗಟ್ಟಿ ಅಮೂಲ್ಯ ಜೀವ ಉಳಿಸಲು ಮುಂದಾಗುವಂತೆ ಡಿವೈಎಸ್ಪಿ ಚೈತ್ರಾ ಮನವಿ ಮಾಡಿದರು.

    ನಗರಸಭೆ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ನಗರದ ಗಾಂಧಿ ವೃತ್ತದಲ್ಲಿ ಬುಧವಾರ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.

    ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. ಇನ್ನೊಬ್ಬರ ಜೀವಕ್ಕೂ ಬೆಲೆ ಇದೆ ಎನ್ನುವ ಸತ್ಯ ಅರಿತು ರಸ್ತೆಯಲ್ಲಿ ವಾಹನ ಚಲಾಯಿಸಬೇಕು ಎಂದು ಸೂಚಿಸಿದರು.

    ಚಾಲಕರು ವಾಹನದಲ್ಲಿ ಕುಳಿತ ಕೂಡಲೇ ತಮ್ಮ ಕುಟುಂಬಸ್ಥರನ್ನು ನೆನಪಿಸಿಕೊಳ್ಳಬೇಕು. ಎಲ್ಲಕ್ಕಿಂತ ಜೀವ ಮುಖ್ಯ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು.

    ಮೊಬೈಲ್‌ನಲ್ಲಿ ಮಾತನಾಡುತ್ತಾ, ಕುಡಿದು ವಾಹನ ಚಾಲನೆ ಮಾಡುವುದನ್ನು ನಿಲ್ಲಿಸಬೇಕು.

    ಬಸ್, ಕ್ರೂಸರ್, ಬುಲೆಟ್ ಬೈಕ್ ಇತರ ವಾಹನಗಳ ಕರ್ಕಶ ಶಬ್ಧದಿಂದ ಸಾರ್ವಜನಿಕರಿಗೆ ಕಿರಿಕಿರಿಯಾಗುತ್ತಿದೆ. ಇದಕ್ಕೆ ಸ್ವಯಂ ಕಡಿವಾಣ ಹಾಕದಿದ್ದರೆ ಕ್ರಮ ಖಚಿತ ಎಂದು ಎಚ್ಚರಿಸಿದರು.

    ಬೇಕಾಬಿಟ್ಟಿಯಾಗಿ ವಾಹನ ಚಾಲನೆ ಮಾಡಿದರೆ ದಂಡ ವಿಧಿಸಲಾಗುವುದು. ಪಾಲಕರು ಶಾಲಾ-ಕಾಲೇಜು ಮಕ್ಕಳಿಗೆ ಬೈಕ್ ಕೊಡುವ ಮುನ್ನ ಎಚ್ಚರಿಕೆ ವಹಿಸಬೇಕು ಎಂದರು.

    ನಗರಸಭೆ ಪೌರಾಯುಕ್ತ ಮಹಾಂತೇಶ್, ಸಿಪಿಐ ಕಾಳಿಕೃಷ್ಣ, ಕಾಂತರಾಜ್, ಪಿಸಿಐ ಮಂಜುನಾಥ್, ಅನುಸೂಯಾ, ಪ್ರವೀಣ್, ನಾಗರಾಜ್, ಮಂಜುನಾಥ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts