More

    ವಿದ್ಯಾರ್ಥಿ ಹಂತದಲ್ಲೇ ನಿಯಮ ಪಾಲಿಸಿ: ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಸಲಹೆ

    ಮಂಡ್ಯ: ವಿದ್ಯಾರ್ಥಿ ಜೀವನದಿಂದಲೇ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮ ಹಾಗೂ ನಿಯಮಗಳನ್ನು ಬಗ್ಗೆ ತಿಳಿದುಕೊಳ್ಳುವುದರ ಜತೆಗೆ ಪಾಲಿಸಬೇಕು ಎಂದು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಸಭಾಧ್ಯಕ್ಷೆ ಮೀರಾ ಶಿವಲಿಂಗಯ್ಯ ಸಲಹೆ ನೀಡಿದರು.
    ನಗರದ ಮಾಂಡವ್ಯ ಎಕ್ಸಲೆನ್ಸ್ ಪಿಯು ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರತಿಯೊಬ್ಬರು ಕಾನೂನುಗಳನ್ನು ತಿಳಿದುಕೊಳ್ಳಬೇಕು. ಕಳೆದ ಎರಡು ಮೂರು ವರ್ಷಗಳಿಂದ ಕೋವಿಡ್‌ನಿಂದಾಗಿ ಶಾಲಾ ಕಾಲೇಜುಗಳಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ ನಡೆದಿರಲಿಲ್ಲ. ರಸ್ತೆ ಸುರಕ್ಷತೆಯ ಉಪಯುಕ್ತತೆಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ತಿಳಿಸಿದರು.
    ಕಾರ್ಯಕ್ರಮ ಉದ್ಘಾಟಿಸಿದ ಪ್ರಾದೇಶಿಕ ಸಾರಿಗೆ ಅಧಿಕಾರಿ ವಿವೇಕಾನಂದ ಮಾತನಾಡಿ, ವಿದ್ಯಾರ್ಥಿಗಳು 18 ವರ್ಷ ತುಂಬುವವರೆಗೂ ವಾಹನ ಚಾಲನೆ ಮಾಡಬಾರದು. ಒಂದು ವೇಳೆ ಮಾಡಿದರೆ ಅದು ಅಪರಾಧ. ವಾಹನ ಚಾಲಕರು ಪ್ರತಿಯೊಬ್ಬರು ಡ್ರೈವಿಂಗ್ ಲೈಸನ್ಸ್, ಇನ್ಸುರೆನ್ಸ್, ಹೆಲ್ಮೆಟ್ ಸೇರಿದಂತೆ ಸರ್ಕಾರ ಆದೇಶವನ್ನು ಪ್ರತಿಯೊಬ್ಬರೂ ಪಾಲಿಸಬೇಕು. ವಿದ್ಯಾರ್ಥಿಗಳು ರಸ್ತೆ ಸುರಕ್ಷತಾ ಸಪ್ತಾಹದ ಬಗ್ಗೆ ತಮ್ಮ ನೆರೆಹೊರೆಯವರಿಗೆ ಹಾಗೂ ಪಾಲಕರಿಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
    ಪ್ರಾದೇಶಿಕ ಸಾರಿಗೆ ಇಲಾಖೆಯ ಅಧೀಕ್ಷಕ ಎಂ.ಸಿ.ಎನ್. ಪ್ರಸಾದ್, ಸಂತೋಷ್, ಪ್ರಾಂಶುಪಾಲ ಎಚ್. ಎಂ.ಶ್ರೆನಿವಾಸ್, ರಂಗಸ್ವಾಮಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts