ರಸ್ತೆ ಸುರಕ್ಷತೆ ಮಾಹಿತಿ ಕಾರ್ಯಕ್ರಮ

surakshathe
Published on

ಕುಂದಾಪುರ: ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ-2025ರ ಪ್ರಯುಕ್ತ ಕುಂದಾಪುರ ಸಂಚಾರ ಪೊಲೀಸ್ ಠಾಣಾ ವತಿಯಿಂದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮಾಹಿತಿ ಕಾರ್ಯಕ್ರಮ ಮಂಗಳವಾರ ನಡೆಯಿತು.

ಕುಂದಾಪುರ ಸಂಚಾರ ಪೊಲೀಸ್ ಠಾಣೆ ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸುರೇಶ್ ಕೆ. ರಸ್ತೆ ಸುರಕ್ಷತೆ ಬಗ್ಗೆ ವಿದ್ಯಾರ್ಥಿಗಳು ಕೈಗೊಳ್ಳಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು. ಸಹಾಯಕ ಸಬ್ ಇನ್‌ಸ್ಪೆಕ್ಟರ್‌ಗಳಾದ ನರೇಶ್, ನಾಗಪ್ಪ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net