More

    ರಸ್ತೆ ಸುರಕ್ಷತಾ ನಿಯಮ ಪಾಲಿಸಿ ಅಪಘಾತ ತಪ್ಪಿಸಿ

    ಮದ್ದೂರು: ಪ್ರತಿಯೊಬ್ಬ ವಾಹನ ಸವಾರರು ಕಡ್ಡಾಯವಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಅನುಸರಿಸುವ ಮೂಲಕ ಆಗುತ್ತಿರುವ ಅಘಾತಗಳನ್ನು ತಪ್ಪಿಸಬೇಕೆಂದು ಮದ್ದೂರು ಸಂಚಾರ ಠಾಣೆ ಪಿಎಸ್‌ಐ ಮಹೇಶ್ ತಿಳಿಸಿದರು.

    ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜಿನಲ್ಲಿ ಸಂಚಾರ ಪೋಲೀಸ್ ಠಾಣೆ ವತಿಯಿಂದ ಗುರುವಾರ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಜಾಥಾ ಹಾಗೂ ಸೀಟ್‌ಬೆಲ್ಟ್ ಮತ್ತು ಹೆಲ್ಮೆಟ್ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪಾಲಕರು ಶಾಲಾ-ಕಾಲೇಜುಗಳಿಗೆ ತಮ್ಮ ಮಕ್ಕಳನ್ನು ಕರೆತರುವ ವೇಳೆ ಕಡ್ಡಾಯವಾಗಿ ಸೀಟ್‌ಬೆಲ್ಟ್ ಮತ್ತು ಹೆಲ್ಮೆಟ್ ಧರಿಸುವ ಮೂಲಕ ಅಪಘಾತಗಳನ್ನು ತಪ್ಪಿಸುವಂತೆ ಹೈಕೋರ್ಟ್ ಆದೇಶದಂತೆ ಮಕ್ಕಳನ್ನು ಕರೆತರುವ ಸಂದರ್ಭದಲ್ಲಿ ರಸ್ತೆ ಸುರಕ್ಷತೆ ಕ್ರಮಗಳನ್ನು ಪಾಲಿಸಬೇಕೆಂದರು.

    ಅತಿ ಚಿಕ್ಕ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸುತ್ತಿರುವ ಉದಾಹರಣೆಗಳು ಸಾಕಷ್ಟಿದ್ದು, ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಮತ್ತು ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕೆಂದು ಮನವಿ ಮಾಡಿದರು.

    18 ವರ್ಷದೊಳಗಿನ ಮಕ್ಕಳು ವಾಹನ ಚಾಲನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದ್ದು ಆರ್‌ಸಿ ಮಾಲೀಕರಿಗೆ 25 ಸಾವಿರ ರೂ. ದಂಡ ವಿಧಿಸುವ ಅವಕಾಶವಿದ್ದು ಕಾರು ಚಾಲನೆ ಮಾಡುವವರು ಸೀಟ್‌ಬೆಲ್ಟ್ ಸುರಕ್ಷಾ ಸಾಧನಗಳನ್ನು ಬಳಕೆ ಮಾಡಿಕೊಂಡು ಆಗುತ್ತಿರುವ ಅನಾಹುತಗಳನ್ನು ತಪ್ಪಿಸಬೇಕೆಂದರು.

    ಇತ್ತೀಚಿನ ದಿನಗಳಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಹಲವಾರು ಅಪಘಾತಗಳು ಸಂಭವಿಸಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸುತ್ತಿರುವುದು ಆತಂಕಕಾರಿ ವಿಚಾರವಾಗಿದ್ದು ವಾಹನ ಚಲಾಯಿಸುವಾಗ ಮೊಬೈಲ್ ಬಳಕೆ ಹಾಗೂ ಮದ್ಯಪಾನವನ್ನು ಸೇವಿಸಿ ವಾಹನ ಚಾಲನೆ ಮಾಡಬಾರದೆಂದು ಹೇಳಿದರು.

    ಹೆದ್ದಾರಿಯಲ್ಲಿ ಚಾಲನೆ ಮಾಡುವಾಗ ವಾಹನ ಚಾಲಕರು ಪಥಶಿಸ್ತುಪಾಲಿಸಿ ಭಾರಿ ವಾಹನಗಳು ಎಡಭಾಗದ ಪಥ, ಲಘು ವಾಹನಗಳು ಬಲಭಾಗದ ಪಥದಲ್ಲಿ ಚಲಿಸಲು ಅನುವು ಮಾಡಿಕೊಡಬೇಕು. ವಾಹನ ಸವಾರರು ಐಎಸ್‌ಐ ಮಾರ್ಕ್‌ನ ಹೆಲ್ಮೆಟ್ ಧರಿಸಿ ಸುರಕ್ಷಿತ ಚಾಲನೆಗಾಗಿ ಸಂಚಾರ ನಿಯಮಗಳನ್ನು ಪಾಲಿಸಿ ಅಪಘಾತಗಳನ್ನು ತಪ್ಪಿಸಲು ಪೋಲೀಸ್ ಇಲಾಖೆಯೊಂದಿಗೆ ಕೈಜೊಡಿಸಬೇಕೆಂದರು. ವಿದ್ಯಾರ್ಥಿಗಳು ಇತರರಿಗೆ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿ ಆಗುತ್ತಿರುವ ಅನಾಹುತಗಳನ್ನು ತಪ್ಪಿಸಬೇಕೆಂದು ಕೋರಿದರು.

    ಸಂಚಾರ ಠಾಣೆ ಎಎಸ್‌ಐ ರಮೇಶ್, ಕಾಲೇಜು ಪ್ರಾಂಶುಪಾಲ ಕೆ.ಬಿ.ನಾರಾಯಣ್ ಹಾಗೂ ಸಿಬ್ಬಂದಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts